Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಕಲ್ಯಾಣ : ಜೂ.28 ರ ಬಸವಕಲ್ಯಾಣ ಚಲೋ...

ಬಸವಕಲ್ಯಾಣ : ಜೂ.28 ರ ಬಸವಕಲ್ಯಾಣ ಚಲೋ ಪ್ರತಿಭಟನೆಯ ಭಿತ್ತಿಪತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Jun 2026 12:51 PM IST
share
ಬಸವಕಲ್ಯಾಣ : ಜೂ.28 ರ ಬಸವಕಲ್ಯಾಣ ಚಲೋ ಪ್ರತಿಭಟನೆಯ ಭಿತ್ತಿಪತ್ರ ಬಿಡುಗಡೆ
ಜಿಲ್ಲಾಧಿಕಾರಿ, ಎಸ್ಪಿಗೆ ಮನವಿ ಪತ್ರ ಸಲ್ಲಿಕೆ

ಬೀದರ್‌ : ಜೂ. 28ರಂದು ಬಸವಕಲ್ಯಾಣದಲ್ಲಿ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನ್ಹೇರಿ ಸ್ವಾಮೀಜಿಯ ನೇತೃತ್ವದಲ್ಲಿ ಆಯೋಜಿಸಲಾದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮ ವಿರೋಧಿಸಿ ಜೂ. 28ರಂದೇ ಹಮ್ಮಿಕೊಳ್ಳಲಾದ ಬಸವಕಲ್ಯಾಣ ಚಲೋ ಪ್ರತಿಭಟನೆಯ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ನಗರದ ಐಎಂಎ ಹಾಲ್‌ನಲ್ಲಿ ಶನಿವಾರ ಸಭೆ ನಡೆಸಿ, ಹೋರಾಟದ ಬಗ್ಗೆ ಚರ್ಚಿಸಿದ ನಂತರ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ಬಸವ ಭಕ್ತರನ್ನು ʻಬಸವ ತಾಲಿಬಾನಿʼ ಎಂದು ಉಲ್ಲೇಖಿಸಿರುವುದು ಹಾಗೂ ಬಸವ ತತ್ವ ಮತ್ತು ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಇಂತಹ ಹೇಳಿಕೆಗಳು ಬಸವಾನುಯಾಯಿಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ. ಬಸವಾದಿ ಶರಣರ ಪವಿತ್ರ ನೆಲವಾದ ಬಸವಕಲ್ಯಾಣದ ಗೌರವ, ಬಸವ ಭಕ್ತರ ಭಾವನೆಗಳು ಹಾಗೂ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಕನ್ಹೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶವನ್ನು ವಿರೋಧಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು.

ಭಿತ್ತಿಪತ್ರ ಬಿಡುಗಡೆಯ ನಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಬಸವಕಲ್ಯಾಣದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಬಸವ ಭಕ್ತರ ಭಾವನೆಗಳು ಹಾಗೂ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಂಡು ಕನ್ಹೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಲಾಯಿತು.

ಇದು ಯಾವುದೇ ವ್ಯಕ್ತಿಯ ವಿರುದ್ಧದ ವೈಯಕ್ತಿಕ ವಿರೋಧವಲ್ಲ. ಬಸವ ತತ್ವ, ಸಾರ್ವಜನಿಕ ಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಸಲ್ಲಿಸಲಾಗುತ್ತಿರುವ ಪ್ರಜಾಸತ್ತಾತ್ಮಕ ಹಾಗೂ ಶಾಂತಿಯುತ ಮನವಿಯಾಗಿದೆ. ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದಲ್ಲಿ ಅಥವಾ ಕನ್ಹೇರಿ ಸ್ವಾಮೀಜಿಯನ್ನು ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರೆ, ನಾಡಿನ ಬಸವ ಭಕ್ತರಲ್ಲಿ ತೀವ್ರ ಅಸಮಾಧಾನ ಮತ್ತು ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಸಾರ್ವಜನಿಕ ಭಾವನೆಗಳಿಗೆ ಧಕ್ಕೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರು, ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ್ ಧನ್ನೂರ್, ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಸವರಾಜ್ ಬುಳ್ಳಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ, ಬಸವ ಸೇವಾ ಪ್ರತಿಷ್ಠಾನದ ಗಂಗಾಬಿಕೆ ಪಾಟೀಲ್‌, ಬಸವಕಲ್ಯಾಣದ ಮಹಾಲಿಂಗದೇವರು, ಶಿವಾನಂದ್ ಸ್ವಾಮೀಜಿ, ರಮೇಶ್ ಮಠಪತಿ ಹಾಗೂ ಶಿವಶರಣಪ್ಪ ಹುಗ್ಗೆ ಪಾಟೀಲ್‌ ಸೇರಿದಂತೆ ಬಸವಪರ ಸಂಘಟನೆಗಳ ಪ್ರಮುಖರು, ಬಸವಾನುಯಾಯಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X