77ನೇ ಗಣರಾಜ್ಯೋತ್ಸವ: ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಧ್ವಜಾರೋಹಣ

ಬೀದರ್: 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಎನ್‌ಸಿಸಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಸುಮಾರು 13 ತುಕಡಿಗಳು ಶಿಸ್ತುಬದ್ಧ ಪರೇಡ್ ನಡೆಸಿ ಗೌರವ ವಂದನೆ ಸಲ್ಲಿಸಿದವು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಶೈಲೆಂದ್ರ ಬೇಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮೂಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಹಾಗೂ ಬುಡಾ ಅಧ್ಯಕ್ಷ ಬಸವರಾಜ್ ಜಾಬಶೇಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





