Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್–ದೆಹಲಿ ನೇರ ರೈಲು ಸೇವೆಗೆ ಆಪ್...

ಬೀದರ್–ದೆಹಲಿ ನೇರ ರೈಲು ಸೇವೆಗೆ ಆಪ್ ಆಗ್ರಹ

ಬೀದರ್ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ10 Sept 2026 6:48 PM IST
share
ಬೀದರ್–ದೆಹಲಿ ನೇರ ರೈಲು ಸೇವೆಗೆ ಆಪ್ ಆಗ್ರಹ

ಬೀದರ್: ಬೀದರ್‌ನಿಂದ ನವದೆಹಲಿಗೆ ನೇರ ರೈಲು ಸೇವೆ ಆರಂಭಿಸಬೇಕು ಹಾಗೂ ಬೀದರ್ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಗ್ರಂಥಾಲಯ ಮತ್ತು ವಾಚನಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ (ಆಪ್) ಬೀದರ್ ಜಿಲ್ಲಾ ಘಟಕವು ರೈಲ್ವೆ ಅಧಿಕಾರಿಗಳ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದೆ.

ಬುಧವಾರ ಸಲ್ಲಿಸಿದ ಮನವಿಯಲ್ಲಿ, ಬೀದರ್ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ಬೀದರ್–ದೆಹಲಿ ನೇರ ರೈಲು ಸೇವೆ ಆರಂಭಿಸಿದರೆ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ವಿವಿಧ ಕೆಲಸಗಳಿಗಾಗಿ ದೆಹಲಿಗೆ ತೆರಳುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.

ಬೀದರ್ ನಗರವು ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದು, ಪ್ರತಿದಿನ ಸಾವಿರಾರು ಪ್ರಯಾಣಿಕರು ಬೀದರ್ ರೈಲ್ವೆ ನಿಲ್ದಾಣವನ್ನು ಬಳಸುತ್ತಿದ್ದಾರೆ. ರೈಲುಗಳ ಆಗಮನ ಮತ್ತು ನಿರ್ಗಮನದ ನಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಮತ್ತು ವಾಚನಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ.

ಗ್ರಂಥಾಲಯದಲ್ಲಿ ಪತ್ರಿಕೆಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು ಹಾಗೂ ವಿವಿಧ ವಿಷಯಗಳ ಗ್ರಂಥಗಳನ್ನು ಒದಗಿಸಿದರೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜ್ಞಾನಾರ್ಜನೆಗೆ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬೀದರ್ ಜಿಲ್ಲೆಯ ಜನರ ಈ ಎರಡೂ ಬೇಡಿಕೆಗಳನ್ನು ಕೇಂದ್ರ ರೈಲ್ವೆ ಸಚಿವರು ಪರಿಗಣಿಸಿ, ಬೀದರ್–ದೆಹಲಿ ನೇರ ರೈಲು ಸೇವೆ ಆರಂಭಿಸುವುದರ ಜೊತೆಗೆ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಪ್ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ, ಪಕ್ಷದ ಪ್ರಮುಖರಾದ ಎಂ.ಡಿ ಜಾವಿದ್, ಬಸವರಾಜ್‌ ಸ್ವಾಮಿ, ಓಂಕಾರ್‌ ಎನ್, ಮೋಹನ್ ಕುಮಾರ್‌, ಎಂ.ಡಿ.ಶರೀಫ್, ಶಿವರಾಜ್‌ ಶಿವಗೊಂಡ, ನಂದಿಬಸವ ಪಾಟೀಲ್, ದಿಲೀಪಕುಮಾರ್, ಸೂರ್ಯಕಾಂತ ರಾಂಪೂರೆ, ಪ್ರಕಾಶ್ ಮಾಣಿಕ, ತುಳಸಿದಾಸ್‌ ವಾಘಮಾರೆ, ರಮೇಶ್ ಶೆಟಕಾರ್‌, ಸೈಯದ್ ಮುಕಿಂಗ್, ರಾಜಶೇಖರ್, ದಿಲೀಪಕುಮಾರ್, ವಿಠಲ್ ಹಾಗೂ ತುಕಾರಾಮ್ ಇದ್ದರು.

Tags

DelhiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X