ಬೀದರ್ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ

ಬೀದರ್ : ಜಿಲ್ಲಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಕ ಮಾಡಿ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ಹಲವಾರು ಕಾಂಗ್ರೆಸ್ ನಾಯಕರು ಪೈಪೋಟಿ ನಡೆಸಿದ್ದರು. ಆದರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಈ ಬಾರಿ ಎಐಸಿಸಿ ವೀಕ್ಷಕ ರಾಜೇಶ್ ಲಿಲೋಠಿಯಾ ಅವರ ತಂಡವು ಜು. 28ರಂದು ಬೀದರ್‌ಗೆ ಆಗಮಿಸಿ, ತಾಲೂಕುವಾರು ಸಭೆ ನಡೆಸಿ ಮಾಹಿತಿ ಸಂಗ್ರಹಿಸಿತ್ತು. ಇದೀಗ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ.
ಅಬ್ದುಲ್ ಮನ್ನಾನ್ ಸೇಠ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಜನಪರ ಹೋರಾಟಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದಾರೆ.
ಬಸವರಾಜ್ ಜಾಬಶೆಟ್ಟಿ ಅವರು 2017 ರಿಂದ ಇಲ್ಲಿಯವರೆಗೆ 9 ವರ್ಷಗಳ ಕಾಲ ಬೀದರ್ ಜಿಲ್ಲಾ ಕಾಂಗ್ರೆಸ್‌ಗೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
Next Story




