Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮೊಳಕೇರಾ ಗ್ರಾಮದಲ್ಲಿ ಆಕಸ್ಮಿಕ ಸ್ಪೋಟ:...

ಮೊಳಕೇರಾ ಗ್ರಾಮದಲ್ಲಿ ಆಕಸ್ಮಿಕ ಸ್ಪೋಟ: ಸ್ಥಳಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ ನೀಡಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ1 Feb 2026 8:15 PM IST
share
ಮೊಳಕೇರಾ ಗ್ರಾಮದಲ್ಲಿ ಆಕಸ್ಮಿಕ ಸ್ಪೋಟ: ಸ್ಥಳಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ ನೀಡಿ ಪರಿಶೀಲನೆ

ಹುಮನಾಬಾದ್: ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಘಟನಾ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಘಟನೆ ಕುರಿತು ವಿವರವಾದ ಮಾಹಿತಿ ಪಡೆದು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಮೇಲ್ನೋಟಕ್ಕೆ ಮನೆಯ ಮುಂಭಾಗದಲ್ಲಿ ರಾಸಾಯನಿಕ ಮಿಶ್ರಿತ ವಸ್ತುಗಳನ್ನು ಶೇಖರಣೆ ಮಾಡಿರುವುದರಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ಕುರಿತು ಸಮಗ್ರ ತನಿಖೆ ನಡೆಯುತ್ತಿದ್ದು, ಸಂಪೂರ್ಣ ತನಿಖಾ ವರದಿ ಬಂದ ತಕ್ಷಣ ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ ಯಾರೇ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಲೋಪ ಕಂಡು ಬಂದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ವೇಳೆ ಸಚಿವರು ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಕೆಮಿಕಲ್ ತ್ಯಾಜ್ಯದಿಂದ ಗ್ರಾಮದ ಸುತ್ತಲಿನ ವಾತಾರಣ, ಹವಾಮಾನ ಕಲುಷಿತಗೊಳ್ಳುತ್ತಿದೆ ಎಂದು ಸಚಿವರಿಗೆ ಗ್ರಾಮಸ್ಥರು ದೂರು ಸಲ್ಲಿಸಿದರು. ರಾಜ್ಯ ಪರಿಸರ ಇಲಾಖೆಯಿಂದ ಒಂದು ತಂಡವನ್ನು ಕರೆಸಿ ತನಿಖೆ ನಡೆಸಿ ತಪಿಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಸಚಿವರು ಭರವಸೆ ನೀಡಿದರು.

ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಘಟನೆಯಿಂದ ಯಾರೂ ಭಯಪಡುವ ಅಗತ್ಯವಿಲ್ಲ. ಈಗಾಗಲೇ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ಈ ಘಟನೆಯಲ್ಲಿ ಯಾರೇ ಶಾಮಿಲಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಹುಮನಾಬಾದ್‌ ಶಾಸಕ ಡಾ.ಸಿದ್ಧಲಿಂಗ ಪಾಟೀಲ್, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಬಿ.ಪಾಟೀಲ್, ಮಾಜಿ ಶಾಸಕ ರಾಜಶೇಖರ್ ಬಿ.ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹುಮನಾಬಾದ್ ತಹಸೀಲ್ದಾರ್ ಅಜುಂ ತಬಸುಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Ishwara Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X