ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅವ್ಯವಹಾರ ಆರೋಪ; ಜು.4 ರಂದು ಪ್ರತಿಭಟನೆ : ವಿಷ್ಣುವರ್ಧನ್ ವಾಲ್ದೊಡ್ಡಿ

ಬೀದರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅವ್ಯವಹಾರ ನಡೆದಿದ್ದು, ಇದರ ವಿರುದ್ಧ ಜು.4 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಭೀಮ್ ಸೇನೆಯ ರಾಜ್ಯ ಕಾರ್ಯಧ್ಯಕ್ಷ ವಿಷ್ಣುವರ್ಧನ್ ವಾಲ್ದೊಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ಮಿಷನ್ ಶಕ್ತಿ ಯೋಜನೆ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗಳಲ್ಲಿ ಅವ್ಯವಹಾರ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಮನವಿ ಮಾಡಿ ಒಂದು ತಿಂಗಳು ಕಳೆದರೂ ಕೂಡ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಈ ಕಾರಣದಿಂದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.





