Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರು ಗ್ರಾಪಂ ಕಾಮಗಾರಿಗಳಲ್ಲಿ...

ಹುಲಸೂರು ಗ್ರಾಪಂ ಕಾಮಗಾರಿಗಳಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹಿಸಿ ಸದಸ್ಯರ ಧರಣಿ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ20 Nov 2026 9:37 PM IST
share
ಹುಲಸೂರು ಗ್ರಾಪಂ ಕಾಮಗಾರಿಗಳಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹಿಸಿ ಸದಸ್ಯರ ಧರಣಿ

ಹುಲಸೂರು: ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದ್ದು, ಕಳಪೆ ಕಾಮಗಾರಿಗಳ ಜತೆಗೆ ನಕಲಿ ಬಿಲ್‌ಗಳ ಮೂಲಕ ಹಣ ಪಾವತಿಸಲಾಗಿದೆ ಎಂದು ಆರೋಪಿಸಿ ಹುಲಸೂರು ಗ್ರಾಮ ಪಂಚಾಯಿತಿಯ 17 ಸದಸ್ಯರು ಶುಕ್ರವಾರ ಪಂಚಾಯಿತಿ ಆವರಣದಲ್ಲಿ ಧರಣಿ ನಡೆಸಿದರು.

15ನೇ ಹಣಕಾಸು, ನಿಧಿ-1 ಮತ್ತು ನಿಧಿ-2 ಸೇರಿದಂತೆ ವಿವಿಧ ಯೋಜನೆಗಳಡಿ 2023-24ರಿಂದ 2026-27ನೇ ಸಾಲಿನವರೆಗೆ ಸುಮಾರು 84 ಲಕ್ಷ ರೂ. ಮೊತ್ತದ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಕಾಮಗಾರಿಗಳಿಗೆ ಸಂಬಂಧಿಸಿದ ಅಳತೆ ಪುಸ್ತಕ (ಎಂ.ಬಿ. ರೆಕಾರ್ಡ್), ಛಾಯಾಚಿತ್ರಗಳು ಹಾಗೂ ಅಗತ್ಯ ದಾಖಲೆಗಳಿಲ್ಲದೆ ಬಿಲ್ ಪಾವತಿಸಲಾಗಿದೆ. ಬೀದಿದೀಪ ಅಳವಡಿಕೆ ಹೆಸರಿನಲ್ಲಿ 6 ಲಕ್ಷ ರೂ. ಪಾವತಿಸಿರುವ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಹಿಂದಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ ಮಿಲಿಂದಕರ ಅವರ ಅವಧಿಯಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಈವರೆಗೆ ಹಣ ಮರುಪಾವತಿಯಾಗಿಲ್ಲ. ನಂತರ ಅಧಿಕಾರ ವಹಿಸಿಕೊಂಡ ವಿನಯಕುಮಾರ ಅವರ ಅವಧಿಯಲ್ಲಿ ಸುಮಾರು 18 ಲಕ್ಷ ರೂ. ಹಣ ಡ್ರಾ ಮಾಡಲಾಗಿದ್ದು, ಅದಕ್ಕೆ ಸಂಬಂಧಿಸಿದ ಕಾಮಗಾರಿಗಳ ದಾಖಲೆ ಹಾಗೂ ಎಂ.ಬಿ. ರೆಕಾರ್ಡ್ ಒದಗಿಸಿಲ್ಲ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದರೂ ಮಾಹಿತಿ ನೀಡಿಲ್ಲ ಎಂದು ಸದಸ್ಯರು ದೂರಿದರು.

ಸಾಮಾನ್ಯ ಸಭೆಯಲ್ಲಿ ಚರ್ಚಿಸದ ವಿಷಯಗಳನ್ನು ನಡಾವಳಿ ಪುಸ್ತಕದಲ್ಲಿ ದಾಖಲಿಸಲಾಗಿದೆ. ವಾಟರ್‌ಮ್ಯಾನ್ ನೇಮಕಾತಿಗೆ ಸಂಬಂಧಿಸಿದಂತೆ ಮೂವರ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಕ್ಕೂ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಮೃತ ವಾಟರ್‌ಮ್ಯಾನ್ ಭೀಮರಾವ ಜಾಧವ ಅವರ ಮಗನಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಕಲ್ಪಿಸಬೇಕು. ಕ್ರಿಯಾಯೋಜನೆ ಹಾಗೂ ವಿವಿಧ ನಿಧಿಗಳ ವಹಿವಾಟಿನ ದಾಖಲೆಗಳನ್ನು ಒದಗಿಸಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ರವೀಂದ್ರ ಸಿಂಗಾರೆ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಘಾಮಾವತಿ ರಾಠೋಡ ಅವರಿಗೆ ಸಲ್ಲಿಸಿದರು. ಈ ವೇಳೆ ಸದಸ್ಯರನ್ನು ಮನವೊಲಿಸಲು ಪ್ರಯತ್ನಿಸಿದರೂ ಅವರು ಪ್ರತಿಭಟನೆ ಹಿಂಪಡೆಯಲು ಒಪ್ಪಲಿಲ್ಲ. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್, ಆರೋಪಗಳ ಕುರಿತು ಕೂಡಲೇ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪಿಡಿಒ ನಡುವೆ ಮಾತಿನ ಚಕಮಕಿ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಸದಸ್ಯರು ಪಟ್ಟು ಹಿಡಿದರು.

ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅನಿಲ್ ಭೂಸಾರೆ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್ ಗಾಯಕವಾಡ, ಸಂಜು ಭೂಸಾರೆ, ನಿತೇಶ್ ಪಾಟೀಲ, ಗುರುನಾಥ ಕೋಡಂಬಲೆ, ರೋಹಿಣಿ ಭಾಗವತ್ ಜಾನಬಾ, ಅನಿತಾ ರಾಜೇಂದ್ರ ಜಾಧವ, ಅನುಷಯಾ ಸೂರ್ಯಕಾಂತ, ಮುಕ್ತಬಾಯಿ ರಾಮರತನ್, ಸುನೀತಾ ಶಿವಕುಮಾರ, ದೇವೇಂದ್ರ ಪವಾರ, ನಾಗೇಶ ಮೇತ್ರೆ, ತಂಗೆಮ್ಮ ಜಾಲೂ, ಬಬಿತಾ, ರುಕುಮ, ಮಹಾನಂದಾ ಕಾಡಾದಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Tags

HulasurGram Panchayat
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X