Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 15ನೇ ಹಣಕಾಸು ಯೋಜನೆ ಅನುದಾನ ದುರುಪಯೋಗ...

15ನೇ ಹಣಕಾಸು ಯೋಜನೆ ಅನುದಾನ ದುರುಪಯೋಗ ಆರೋಪ: 18 ಗ್ರಾಮ ಪಂಚಾಯತ್‌ಗಳ ವಿರುದ್ಧ ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 July 2026 5:11 PM IST
share
15ನೇ ಹಣಕಾಸು ಯೋಜನೆ ಅನುದಾನ ದುರುಪಯೋಗ ಆರೋಪ: 18 ಗ್ರಾಮ ಪಂಚಾಯತ್‌ಗಳ ವಿರುದ್ಧ ತನಿಖೆಗೆ ಒತ್ತಾಯ
ಹುಮನಾಬಾದ್ ಶಾಸಕರಿಗೆ ದೂರು ಸಲ್ಲಿಕೆ

ಹುಮನಾಬಾದ್: ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿರಬೇಕಿದ್ದ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಬುಧವಾರ ಹುಮನಾಬಾದ್ ಶಾಸಕ ಡಾ. ಸಿದ್ದು ಪಾಟೀಲ್ ಅವರಿಗೆ ದೂರು ಸಲ್ಲಿಸಲಾಯಿತು.

ದೂರಿನಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಾವಳಿಗಳನ್ನು ಉಲ್ಲಂಘಿಸಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾಗಬೇಕಿದ್ದ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ನಿಯಮದ ಪ್ರಕಾರ, ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗುವ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ-ಎಸ್ಟಿ ಉಪಯೋಜನೆಗಳಿಗೆ ಕಡ್ಡಾಯವಾಗಿ ಹಣ ಮೀಸಲಿಡಬೇಕು. ಆದರೆ, ಇ-ಗ್ರಾಮ ಸ್ವರಾಜ್ ಪೋರ್ಟಲ್‌ನಲ್ಲಿರುವ 2025-26ನೇ ಸಾಲಿನ ಕ್ರಿಯಾ ಯೋಜನೆಗಳ ಪ್ರಕಾರ, ಹುಮನಾಬಾದ್ ವ್ಯಾಪ್ತಿಯ 18 ಗ್ರಾಮ ಪಂಚಾಯಿತಿಗಳಲ್ಲಿ ಸಾಮಾನ್ಯ ವರ್ಗಕ್ಕೆ ಅನುದಾನ ಮೀಸಲಿಟ್ಟಿದ್ದರೂ, ಎಸ್ಸಿ-ಎಸ್ಟಿ ವಿಭಾಗಗಳಿಗೆ ಶೂನ್ಯ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕ್ರಮವು ಎಸ್ಸಿ/ಎಸ್ಟಿ ಉಪಯೋಜನೆ ಕಾಯ್ದೆಯ ಉಲ್ಲಂಘನೆಯಾಗಿದ್ದು, ಪರಿಶಿಷ್ಟ ಸಮುದಾಯಗಳ ಹಕ್ಕುಗಳನ್ನು ಕಸಿದುಕೊಳ್ಳುವ ವ್ಯವಸ್ಥಿತ ಆಡಳಿತಾತ್ಮಕ ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಲಾಗಿದೆ.

ಸಿಂಧನಕೇರಾ, ಧೂಮ್ಮನಸೂರ, ಬೇನಚಿಂಚೋಳಿ, ಚಂದನಹಳ್ಳಿ, ದುಬಲಗುಂಡಿ, ಘಾಟಬೋರಳ, ಘೋಡವಾಡಿ, ಹಳ್ಳಿಖೇಡ (ಕೆ), ಹುಡುಗಿ, ಕಲ್ಲೂರ, ಕನಕಟ್ಟಾ, ಮದರಗಾಂವ, ಮಾಣಿಕನಗರ, ನಂದಗಾವ, ಜಲಸಂಗಿ, ಸೇಡೊಳ, ಸೀತಾಳಗೇರಾ ಹಾಗೂ ಸುಲ್ತಾನಾಬಾದ್ ಗ್ರಾಮ ಪಂಚಾಯಿತಿಗಳಲ್ಲಿ ಈ ಅಕ್ರಮಗಳು ನಡೆದಿವೆ ಎಂದು ದೂರಿನಲ್ಲಿ ಹೇಳಲಾಗಿದೆ.

ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜವಾಬ್ದಾರಿಯಿರುವ ಜನಪ್ರತಿನಿಧಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಎಸ್ಸಿ-ಎಸ್ಟಿ ಸಮುದಾಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ 15ನೇ ಹಣಕಾಸು ಯೋಜನೆಯ ಅನುದಾನವನ್ನು ತಕ್ಷಣ ಮರುಹಂಚಿಕೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸುಶೀಲಕುಮಾರ್ ಎಚ್. ಭೋಲಾ, ಸಿದ್ಧಾರ್ಥ ಜಾನವೀರ್, ಗಣಪತಿ ಅಷ್ಟೋರೆ, ಅನಂತ್ ಮಾಳಗೆ, ವಿಠಲ್ ಶಿವನಾಯಕ್ ಹಾಗೂ ವಿಶಾಲ್ ಸಿಂಧನಕೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Gram Panchayats
share
ವಾರ್ತಾಭಾರತಿ
ವಾರ್ತಾಭಾರತಿ
Next Story
X