ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನ

Photo credit: mungerdivision.bih.nic.in
ಬೀದರ್: ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಯ ಯೋಜನೆಗಳಿಂದ ಯಾವುದೇ ಸಹಾಯಧನ ಪಡೆದು ಮನೆ ನಿರ್ಮಿಸಿಕೊಂಡಿರಬಾರದು. ಮನೆ ನಿರ್ಮಾಣಕ್ಕೆ ನಿಗಧಿಪಡಿಸಿದ ನಿವೇಶನ, ಕಚ್ಚಾ ಮನೆಯ ಸ್ಥಳವನ್ನು ಯಾವುದೇ ಕಾರಣಕ್ಕೂ ಬದಲಾಸುವಂತಿಲ್ಲ. ಸಂಬಂಧಪಟ್ಟ ನಗರ, ಪಟ್ಟಣದ 2024 ರ ಸೆ.1 ರ ಒಳಗಾಗಿ ವಾಸವಿರುವ ಫಲಾನುಭವಿಯೂ ಸಮೀಕ್ಷೆಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹಿಂದೆ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯಡಿಯಲ್ಲಿ ಆಯ್ಕೆಯಾಗಿ ಮನೆ 2023 ರ ಡಿ.31 ರ ನಂತರ ಕೇಂದ್ರ ಸರ್ಕಾರದಿಂದ ಮನೆ ರದ್ದಾದ ಫಲಾನುಭವಿಗಳು ಸಮೀಕ್ಷೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ. ಕುಟುಂಬದ ವಾರ್ಷಿಕ ಆದಾಯ 3 ಲಕ್ಷದೊಳಗಡೆ ಇರಬೇಕು.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಯೋಜನೆಯ ಸೌಲಭ್ಯ ಪಡೆಯಲು https://pmaymis.gov.in/pmaymis2-204/PMAY_SURVEY/Eligibility Check.aspx ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜು.15 ಕೊನೆಯ ದಿನಾಂಕವಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಚಿಟಗುಪ್ಪಾ ಪುರಸಭೆ ಕಾರ್ಯಾಲಯದ ವಸತಿ ವಿಭಾಗದ ಶಾಖೆ ಅಥವಾ ದೂರವಾಣಿ ಸಂಖ್ಯೆ: 08483-277122-277536 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







