ಭಾಲ್ಕಿಯ ಪುರಸಭೆಯಲ್ಲಿ ಕಂಪ್ಯೂಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ್ : ಭಾಲ್ಕಿಯ ಪುರಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಎಸೆಸೆಲ್ಸಿ ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಕ್ ಕಂಪ್ಯೂಟರ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ಪುರಸಭೆಯ ಮುಖ್ಯಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲಾತಿಗಳು : ಎಸೆಸೆಲ್ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರದ ಧೃಢೀಕೃತ ಝರಾಕ್ಸ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚೀನ 3 ಭಾವಚಿತ್ರಗಳು, ಆಧಾರ್ ಕಾರ್ಡ್, ಪ್ರಸ್ತುತ ಚುನಾವಣೆ ಗುರುತಿನ ಚೀಟಿ, ಪಡಿತರ ಚೀಟಿ ಹಾಗೂ ಪ್ಯಾನ್ ಕಾರ್ಡ್ ಝರಾಕ್ಸ್ ಪ್ರತಿ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭಾಲ್ಕಿಯ ಪುರಸಭೆಯಲ್ಲಿ ಪಡೆದುಕೊಂಡು ತಮ್ಮ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಸೆ.10 ರ ಒಳಗಾಗಿ ಭಾಲ್ಕಿ ಪುರಸಭೆಯ ಆವಕ-ಜಾವಕ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಭಾಲ್ಕಿ ಪುರಸಭೆಗೆ ಅಥವಾ ದೂರವಾಣಿ ಸಂಖ್ಯೆ: 08484-262230 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.





