ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಿ : ಅರವಿಂದಕುಮಾರ್ ಅರಳಿ

ಬೀದರ್: ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯಾಗಿತ್ತಿರುವ ಈ ಸಂದರ್ಭದಲ್ಲಿ ನಮ್ಮ ರಾಜ್ಯ ಕಂಡ ಅಪರೂಪದ ನಾಯಕ, ಯುವಕರ ಕಣ್ಮಣಿ, ದಲಿತ-ಅಲ್ಪಸಂಖ್ಯಾತ-ಹಿಂದುಳಿದ ವರ್ಗದ ಜನರ ಆಶಾಕಿರಣ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಈಗಾಗಲೇ ಹಲವು ಸಚಿವ ಸ್ಥಾನಗಳಲ್ಲಿ ತಮ್ಮ ಪ್ರತಿಭೆ ತೋರಿಸಿದ್ದಾರೆ. ಒಳ್ಳೆಯ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ. ಅದಲ್ಲದೇ ಜಗತ್ತಿನಲ್ಲಿಯೇ ತಾವು ಸಚಿವರಿರುವ ಇಲಾಖೆಯ ಹೆಸರು ಮಾಡಿದ್ದಾರೆ. ಇಂತಹ ವ್ಯಕ್ತಿಗೆ ನಮ್ಮ ಪಕ್ಷದ ವರೀಷ್ಠರು ಹೊಸದಾಗಿ ರಚನೆಯಾಗುತ್ತಿರುವ ಈ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸ್ಥಾನ ನೀಡುವ ಮೂಲಕ ಅವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಒಳ್ಳೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ನೀಡಿದರೆ, ಯುವಜನತೆ ಹಾಗೂ ಯುವ ರಾಜಕಾರಣಿಗಳಿಗೆ ಹುಮ್ಮಸ್ಸು ಬರುತ್ತದೆ. ಹಾಗೆಯೇ ಈ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಅವರು ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ. ಆದ್ದರಿಂದ ಅವರನ್ನು ತಪ್ಪದೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಅರಳಿ ಮನವಿ ಮಾಡಿದ್ದಾರೆ.




