ಔರಾದ್ | ಫೆ.4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಬಿ.ಎಂ.ಅಮರವಾಡಿ

ಔರಾದ್ : ಫೆ.4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಔರಾದ್ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಇತ್ತೀಚಿಗೆ ಕನ್ನಡ ಭವನದಲ್ಲಿ ತಾಲೂಕಿನ ವಿವಿಧ ಕನ್ನಡಪರ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಸಾಪ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನದ ಕುರಿತು ಚರ್ಚಿಸಲಾಗಿತ್ತು. ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕನ್ನಡಪರ ಹೋರಾಟಗಾರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಗಡಿಯಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲಾಗುವುದು. ಶೀಘ್ರದಲ್ಲೇ ಕಸಾಪ ಪದಾಧಿಕಾರಿಗಳ ಸಭೆ ಕರೆದು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಹೆಸರು ಘೋಷಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.





