Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಗ್ರಾಮದಲ್ಲೇ ಲಭ್ಯವಿರುವ...

ಔರಾದ್ | ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್

ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ದಿಢೀರ್ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 8:09 PM IST
share
ಔರಾದ್ | ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್

ಔರಾದ್: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಹೇಳಿದರು.

ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ–ಜಿರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಯಾರೂ ಗುಳೆ ಹೋಗಬಾರದು. ತಮ್ಮೂರಿನಲ್ಲೇ ಉದ್ಯೋಗ ಪಡೆದು ಬದುಕು ಕಟ್ಟಿಕೊಳ್ಳಬೇಕು. ವಿಬಿ–ಜಿರಾಮ್‌ಜಿ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನಕ್ಕೆ 382 ರೂ. ಕೂಲಿ ನೀಡಲಾಗುತ್ತಿದ್ದು, 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ 47,750 ರೂ. ಕೂಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ನಂತರ ಕಂದಗೂಳ್ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲ ಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಸ್ಥರಿಗೆ ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಬೆಳವಣಿಗೆ ದಾಖಲಾತಿ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ವಡಗಾಂವ್, ಜಂಬಗಿ ಹಾಗೂ ಸಂತಪೂರದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಶಾಲೆಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಸಮರ್ಪಕವಾಗಿ ತಲುಪಿಸುವಲ್ಲಿ ಯಾವುದೇ ಲೋಪವಾಗಬಾರದು. ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಮಾರುತಿ ರಾಠೋಡ್, ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ಹಾಗೂ ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X