Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಸೋಲಾರ್ ಘಟಕಗಳಿಗೆ ಶಾಸಕ ಪ್ರಭು...

Aurad | ಸೋಲಾರ್ ಘಟಕಗಳಿಗೆ ಶಾಸಕ ಪ್ರಭು ಚವ್ಹಾಣ್‌ ದಿಢೀರ್ ಭೇಟಿ : ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ13 Oct 2026 8:10 PM IST
share
Aurad | ಸೋಲಾರ್ ಘಟಕಗಳಿಗೆ ಶಾಸಕ ಪ್ರಭು ಚವ್ಹಾಣ್‌ ದಿಢೀರ್ ಭೇಟಿ : ಪರಿಶೀಲನೆ

ಔರಾದ್: ತಾಲೂಕಿನ ಚಿಕ್ಲಿ (ಯು), ಮುಧೋಳ್ ಹಾಗೂ ಹಿಪ್ಪಳಗಾಂವ್ ಗ್ರಾಮಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ಸೋಲಾರ್ ಘಟಕಗಳ ಸ್ಥಳಗಳಿಗೆ ಶಾಸಕ ಪ್ರಭು ಚವ್ಹಾಣ್‌ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಲಿ (ಯು) ಹಾಗೂ ಮುಧೋಳ್ ಗ್ರಾಮಗಳಲ್ಲಿನ ಸೋಲಾರ್ ಘಟಕಗಳ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಘಟಕಗಳ ಮುಖ್ಯಸ್ಥರ ವಿರುದ್ಧ ದೂರು ಸಲ್ಲಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಶಾಸಕರು, ಘಟಕಗಳ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡು, ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ಪಕ್ಕದ ಮಹಾರಾಷ್ಟ್ರದಲ್ಲಿ ಸೋಲಾರ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ನೀಡಲಾಗುತ್ತಿದೆ. ಆದರೆ, ಇಲ್ಲಿ ರೈತರಿಗೆ ಕೇವಲ 35 ಸಾವಿರ ರೂ. ನೀಡುತ್ತಿರುವುದು ಸರಿಯೇ? ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಈ ತಾರತಮ್ಯ ಏಕೆ ಎಂದು ಘಟಕಗಳ ಮುಖ್ಯಸ್ಥರನ್ನು ಪ್ರಶ್ನಿಸಿದ ಅವರು, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸೋಲಾರ್ ಯೋಜನೆಗಾಗಿ ಜಮೀನು ನೀಡುವ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರೈತರಿಗೆ ನ್ಯಾಯಯುತ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅವರಿಗೆ ಅನಾನುಕೂಲ ಉಂಟುಮಾಡಿದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಸೋಲಾರ್ ಘಟಕಗಳಲ್ಲಿಯೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರುಗಳು ರೈತರಿಂದ ಸಾಕಷ್ಟು ಬರುತ್ತಿವೆ. ಇಂತಹ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಘಟಕಗಳ ಮುಖ್ಯಸ್ಥರಿಗೆ ಸೂಚಿಸಿದರು.

ಕ್ಷೇತ್ರದ ರೈತರಿಗೆ ಅನುಕೂಲವಾಗಬೇಕು ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಬೇಕು ಎಂಬ ಉದ್ದೇಶದಿಂದಲೇ ಸೋಲಾರ್ ಪಾರ್ಕ್ ಯೋಜನೆಯನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಆದರೆ, ಯೋಜನೆಯಿಂದ ರೈತರಿಗೆ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುತ್ತಿಲ್ಲ ಎಂಬುದು ಗಮನಕ್ಕೆ ಬಂದರೆ ಸುಮ್ಮನೆ ಕೂರುವುದಿಲ್ಲ ಎಂದು ಶಾಸಕ ಪ್ರಭು ಚವ್ಹಾಣ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಪ್ರಕಾಶ್ ಅಲ್ಮಾಜೆ, ಉದಯ್ ಸೋಲಾಪೂರೆ, ಕೇರಬಾ ಪವಾರ್, ರಾಜು ಶೆಳ್ಕೆ, ಸುಜಿತ್ ರಾಠೋಡ್, ಸಂದೀಪ್ ಪಾಟೀಲ್, ಸಂಜು ಮುರ್ಕೆ, ಗಜಾನಂದ್ ವಟಗೆ, ಅಂಕುಶ್ ವಾಡೀಕರ್, ರಾಮ್ ಹಿಪ್ಪಳಗಾಂವ್, ಶ್ರೀಮಂತರಾವ್ ಚವ್ಹಾಣ, ಪ್ರೇಮದಾಸ್ ಸೂರ್ಯವಂಶಿ, ಸೋಪಾನರಾವ್, ಪೀರಖಾನ್ ಪಠಾಣ್, ಅಮ್ಜದ್ ಪಠಾಣ್, ನಾಗನಾಥ್ ಸ್ವಾಮಿ, ಬಾಬು ಗುರೂಜಿ ಹಾಗೂ ರಮೇಶ್ ಪವಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Prabhu ChauhanAurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X