ಔರಾದ್ ಪಟ್ಟಣದಲ್ಲಿ ಎಸ್‌ಐಆರ್ ಜಾಗೃತಿ ಮೂಡಿಸಿದ ಶಾಸಕ ಪ್ರಭು ಚವ್ಹಾಣ

ಬೀದರ್ : ಶಾಸಕ ಪ್ರಭು ಬಿ.ಚವ್ಹಾಣ ಅವರು ಸೋಮವಾರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ವೇಳೆ ಇಂದಿರಾನಗರ್ ತಾಂಡಾ, ಬಸವನ ವಾಡಿ ತಾಂಡಾ ಹಾಗೂ ಪಟ್ಟಣದ ಬೂತ್ ಸಂಖ್ಯೆ 83, 84, 85, 86, 87, 88, 89, 90, 91, 92 ಹಾಗೂ 94 ಸೇರಿದಂತೆ ವಿವಿಧ ಬೂತ್‌ಗಳಿಗೆ ಭೇಟಿ ನೀಡಿ ಎಸ್‌ಐಆರ್ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು.
ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಮತದಾರರಿಗೆ ಅಗತ್ಯ ದಾಖಲೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಹಾಗೆಯೇ ಫಾರ್ಮ್‌ಗಳನ್ನು ವಿತರಿಸುವುದಷ್ಟೇ ಅಲ್ಲದೆ ಅವುಗಳನ್ನು ಸರಿಯಾಗಿ ಭರ್ತಿ ಮಾಡಲು ಮಾರ್ಗದರ್ಶನ ನೀಡಬೇಕು ಎಂದು ಅವರು ಸೂಚಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ತಪ್ಪದಂತೆ ವಿಶೇಷ ಕಾಳಜಿ ವಹಿಸಬೇಕು. ಪ್ರತಿಯೊಬ್ಬ ಮತದಾರರಿಗೂ ಎಸ್‌ಐಆರ್ ಪ್ರಕ್ರಿಯೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟು, ಪರಿಷ್ಕರಣೆ ಕಾರ್ಯವನ್ನು ಸಮಯಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಕೂಡ ಸ್ವ ಇಚ್ಛೆಯಿಂದ ತಮ್ಮ ಮನೆಗೆ ತಲುಪಿಸಲಾದ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿ ಕೊಡಬೇಕು. ಅಗತ್ಯವಿದ್ದಲ್ಲಿ ಬಿಎಲ್‌ಒಗಳ ನೆರವು ಪಡೆಯಬೇಕು. ಇಲ್ಲವಾದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಯಲಿದೆ. ಹಾಗಾಗಿ ಎಚ್ಚರಿಕೆ ವಹಿಸಬೇಕು ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಶಿವಾಜಿರಾವ್ ಪಾಟೀಲ್ ಮುಂಗನಾಳ್, ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಪ್ರವೀಣ್ ಕಾರಬಾರಿ, ಪ್ರಕಾಶ್ ಅಲ್ಮಾಜೆ, ಖಂಡೋಬಾ ಕಂಗಟೆ, ದಯಾನಂದ್ ಘೂಳೆ, ಅಶೋಕ್ ಅಲ್ಮಾಜೆ, ಎಂ.ಡಿ ಸಲಾವುದ್ದಿನ್, ಕೇರಬಾ ಪವಾರ್, ಯಾದು ಮೇತ್ರೆ, ಗುಂಡಪ್ಪ ಮುಧಾಳೆ, ಸಂಜು ವಡೆಯಾರ್, ಬಸವರಾಜ್ ಹಳ್ಳೆ, ಸಂದೀಪ್ ಪಾಟೀಲ್, ಅಶೋಕ್ ಶೆಂಬೆಳ್ಳಿ ಹಾಗೂ ಪ್ರವೀಣ್ ಬುಟ್ಟೆ ಸೇರಿದಂತೆ ಪಕ್ಷದ ಮುಖಂಡರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.






