Aurad | ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪ: ಓರ್ವನ ಬಂಧನ

ಔರಾದ್: ತಾಲೂಕಿನ ಲಾಧಾ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆಸಿದ್ದ ಸುಮಾರು 1.5 ಲಕ್ಷ ರೂ. ಮೌಲ್ಯದ 2 ಕೆಜಿ 650 ಗ್ರಾಂ ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಗೋವಿಂದ್ ಕಿವಡೆ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಭಾಲ್ಕಿ ವಿಭಾಗದ ಡಿವೈಎಸ್ಪಿ ಬಲ್ಲಪ್ಪ ನಂದಗಾವೆ ಅವರ ಮಾರ್ಗದರ್ಶನದಲ್ಲಿ, ಔರಾದ್ ಸಿಪಿಐ ರಘವೀರಸಿಂಗ್ ಠಾಕೂರ್ ನೇತೃತ್ವದಲ್ಲಿ ಸಂತಪೂರ್ ಪೊಲೀಸ್ ಠಾಣೆಯ ಪಿಎಸ್‌ಐ ದಿನೇಶ್ ಎಂ.ಟಿ. ಹಾಗೂ ಸಿಬ್ಬಂದಿ ಹೊಲದ ಮೇಲೆ ದಾಳಿ ನಡೆಸಿದರು.
ದಾಳಿಯ ವೇಳೆ ಅಕ್ರಮವಾಗಿ ಬೆಳೆಸಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Next Story




