Basavakalyan | ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ಆರೋಪ : ಅಣ್ಣನಿಂದಲೇ ತಮ್ಮನ ಹತ್ಯೆ

ಬಸವಕಲ್ಯಾಣ: ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಸಚಿನ್ (25) ಕೊಲೆಯಾದ ಯುವಕ. ಕುಡಿಯಲು ಹಣ ಬೇಕೆಂದು ಪ್ರತಿದಿನ ಮದ್ಯ ಸೇವಿಸಿ ಬಂದು ಸಚಿನ್ ತನ್ನ ಅಣ್ಣ ಹಾಗೂ ಅಕ್ಕನೊಂದಿಗೆ ಜಗಳವಾಡುತ್ತಿದ್ದನು. ಅಲ್ಲದೆ, ಮನೆಯಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಮದ್ಯ ಸೇವನೆ ಮಾಡುತ್ತಿದ್ದನು ಎನ್ನಲಾಗಿದೆ.
ಇದರಿಂದ ಬೇಸತ್ತಿದ್ದ ಸಚಿನ್‌ನ ಅಣ್ಣ ನಿತೀನ್, ಆತನ ಕಿರುಕುಳ ತಾಳಲಾರದೆ ಸಚಿನ್ ಮಲಗಿದ್ದ ವೇಳೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಮಾಡೋಳಪ್ಪ, ಸಿಪಿಐ ಅಲಿಸಾಬ್ ಹಾಗೂ ಪಿಎಸ್ಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Next Story




