Basavakalyan | ಕೂಲಿ ಕಾರ್ಮಿಕ ಹೃದಯಾಘಾತದಿಂದ ಮೃತ್ಯು

ಬಸವಕಲ್ಯಾಣ: ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಚಿಕನಾಗಾಂವ್ ಗ್ರಾಮದಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಶಿವಶರಣಪ್ಪ (65) ಎಂದು ಗುರುತಿಸಲಾಗಿದೆ. ಅವರು ಎಂದಿನಂತೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರು ಅವರನ್ನು ಸಮೀಪದ ಮುಡಬಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದು, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸುಲ್ಫಿ, ಸಹಾಯಕ ನಿರ್ದೇಶಕ ಸಲೀಂ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭು ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯೋಜನೆಯ ಮಾರ್ಗಸೂಚಿ ಹಾಗೂ ನಿಯಮಗಳ ಅನುಸಾರ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
Next Story




