Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Basavakalyan | ಶಿಕ್ಷಣವು ಪ್ರಾದೇಶಿಕ...

Basavakalyan | ಶಿಕ್ಷಣವು ಪ್ರಾದೇಶಿಕ ಅಸಮಾನತೆಯನ್ನು ನೀಗಿಸುತ್ತದೆ: ಪ್ರೊ.ಮೀನಾಕ್ಷಿ ಬಿರಾದಾರ್

‘ಚಿಗುರು ಸಂಭ್ರಮ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Sept 2026 7:07 PM IST
share
Basavakalyan | ಶಿಕ್ಷಣವು ಪ್ರಾದೇಶಿಕ ಅಸಮಾನತೆಯನ್ನು ನೀಗಿಸುತ್ತದೆ: ಪ್ರೊ.ಮೀನಾಕ್ಷಿ ಬಿರಾದಾರ್

ಬಸವಕಲ್ಯಾಣ: ಶಿಕ್ಷಣದ ಮೂಲ ಉದ್ದೇಶವೇ ಎಲ್ಲ ಬಗೆಯಲ್ಲೂ ಸಮಾನತೆ ತರುವುದಾಗಿದೆ. ಪದವಿಗಳು ಕೇವಲ ಸರ್ಟಿಫಿಕೇಟ್‌ಗಳಾಗದೆ, ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಆಧಾರವಾಗಬೇಕು. ಈ ನಿಟ್ಟಿನಲ್ಲಿ ಓದು ಮತ್ತು ಅಧ್ಯಯನ ನಡೆಯಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿರಾದಾರ್ ಹೇಳಿದರು.

ನಗರದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಚಿಗುರು ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ, ಔದ್ಯೋಗಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಗತಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಬೇಕು. ಶಿಕ್ಷಣವು ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಬಸವಾದಿ ಶರಣರು ಬೌದ್ಧಿಕ ಹಾಗೂ ವೈಚಾರಿಕ ಚಿಂತನೆಗಳ ಉತ್ಕೃಷ್ಟತೆಯಿಂದಾಗಿ ಅನುಭವ ಮಂಟಪದಲ್ಲಿ ಸೇರಿದ್ದರು. ಅವರು ಇಡೀ ಸಮುದಾಯವನ್ನು ಅರಿವಿನ ಮಂಟಪವಾಗಿ ರೂಪಿಸಿದ್ದರು ಎಂದು ಹೇಳಿದರು.

ರಂಗಕರ್ಮಿ ಉಮೇಶ್ ಪಾಟೀಲ್ ಮಾತನಾಡಿ, ಸಮಕಾಲೀನ ಬಿಕ್ಕಟ್ಟು ಮತ್ತು ಸಂದಿಗ್ಧತೆಗಳಿಗೆ ರಂಗಭೂಮಿ ಹಾಗೂ ನಾಟಕಗಳು ಕನ್ನಡಿಯಾಗಿವೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ನಾಟಕಗಳು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಪ್ರಾಚಾರ್ಯ ಡಾ. ಭೀಮಾಶಂಕರ್ ಬಿರಾದಾರ್ ಮಾತನಾಡಿ, ಸಾಮಾಜಿಕ ಪ್ರಜ್ಞೆ ಮೂಡಿಸುವ, ಸಾಂಸ್ಕೃತಿಕ ಯಜಮಾನಿಕೆಯನ್ನು ಪ್ರತಿರೋಧಿಸುವ, ಸೂಕ್ಷ್ಮತೆ ಬೆಳೆಸುವ ಹಾಗೂ ಲೋಕವನ್ನು ಅರಿಯುವ ದಾರಿಯಾಗಿ ಶಿಕ್ಷಣ ಮತ್ತು ರಂಗಭೂಮಿ ಕಾರ್ಯನಿರ್ವಹಿಸುತ್ತವೆ. ನೆಲ, ನೀರು, ಕಾಡು ಸೇರಿದಂತೆ ಒಟ್ಟಾರೆ ಜೀವನ ವಿಧಾನ ಹಾಗೂ ಪರಿಸರದ ಕುರಿತು ಪ್ರಜ್ಞೆ ಬೆಳೆಸಿಕೊಳ್ಳುವುದು ಅಗತ್ಯವಿದೆ ಎಂದರು.

ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ್ ರಗಟೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಲೆ, ಮಾನವೀಯತೆ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ಈ ಕಾಲದಲ್ಲಿ ಅಗತ್ಯವಾಗಿದೆ. ಸರ್ವತೋಮುಖ ಬೆಳವಣಿಗೆಗೆ ಅಂತರ್‌ಶಿಸ್ತೀಯ ಜ್ಞಾನ ಮುಖ್ಯವಾಗಿದೆ ಎಂದು ನುಡಿದರು.

ಈ ವೇಳೆ ಬಿಡಿಪಿಸಿ ನಿರ್ದೇಶಕ ಬಸವರಾಜ ತೊಂಡಾರೆ ಮಾತನಾಡಿದರು. ಉಮೇಶ್ ಪಾಟೀಲ್ ಅವರ ‘ಟ್ಯಾಬ್ಲೆಟ್’ ನಾಟಕ ಹಾಗೂ ವೈಶಾಲಿ ಅವರ ‘ಚಂದ್ರಮತಿಯ ಪ್ರಲಾಪ’ ನಾಟಕಗಳ ಏಕಪಾತ್ರಾಭಿನಯ ಗಮನ ಸೆಳೆದವು.

ಈ ಸಂದರ್ಭದಲ್ಲಿ ಬಿಡಿವಿಸಿ ಅಧ್ಯಕ್ಷ ಶಶಿಕಾಂತ್‌ ದುರ್ಗೆ, ಬಿಡಿಪಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ್‌ ಕುರಕೋಟೆ, ಸಹಕಾರ್ಯದರ್ಶಿ ಬಸವರಾಜ್‌ ಬಾಲಕಿಲೆ, ಸುನಿಲ್ ರಾಯವಾಡೆ, ನಿರ್ದೇಶಕ ವೀರಣ್ಣ ಹಲಶೆಟ್ಟೆ, ಬದ್ರಿನಾಥ್ ಪಾಟೀಲ್‌, ಮಲ್ಲಿಕಾರ್ಜುನ್‌ ಚಿರಡೆ, ಪುಷ್ಪಾ ಮಾಮಾ, ಬಿಡಿವಿಸಿ ಕಾರ್ಯದರ್ಶಿ ನಾಗಯ್ಯ ಸ್ವಾಮಿ, ಕೋಶಾಧ್ಯಕ್ಷ ಶಿವರಾಜ್‌ ಶಾಶೆಟ್ಟೆ, ಸೋಮಶೇಖರಯ್ಯ ವಸ್ತ್ರದ, ಮಾಯಾ ಮುರಾಳೆ, ಡಾ. ರುದ್ರಮಣಿ ಮಠಪತಿ ಹಾಗೂ ಡಾ. ಶಾಂತಲಾ ಪಾಟೀಲ್‌ ಇದ್ದರು. ಡಾ. ಬಸವರಾಜ್‌ ಖಂಡಾಳೆ ನಿರೂಪಿಸಿದರು. ಸಂಗೀತಾ ಮಹಾಗಾವೆ ಸ್ವಾಗತಿಸಿದರು. ಜಗದೇವಿ ಜವಳಗೆ ವಂದಿಸಿದರು.

Tags

EducationBasavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X