Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Basavakalyan | ಮಕ್ಕಳಲ್ಲಿನ ನೈಜ...

Basavakalyan | ಮಕ್ಕಳಲ್ಲಿನ ನೈಜ ಪ್ರತಿಭೆ ಹುಡುಕುವ ಶಿಕ್ಷಕರಾಗಬೇಕು: ಶಾಸಕ ಎಸ್. ಸುರೇಶಕುಮಾರ್

ವಾರ್ತಾಭಾರತಿವಾರ್ತಾಭಾರತಿ5 Sept 2026 8:02 PM IST
share
Basavakalyan | ಮಕ್ಕಳಲ್ಲಿನ ನೈಜ ಪ್ರತಿಭೆ ಹುಡುಕುವ ಶಿಕ್ಷಕರಾಗಬೇಕು: ಶಾಸಕ ಎಸ್. ಸುರೇಶಕುಮಾರ್

ಬಸವಕಲ್ಯಾಣ: ಮಕ್ಕಳಲ್ಲಿರುವ ನೈಜ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸುವ ಶಿಕ್ಷಕರಾಗಬೇಕು ಎಂದು ಮಾಜಿ ಸಚಿವ ಹಾಗೂ ರಾಜಾಜಿನಗರ ಶಾಸಕ ಎಸ್. ಸುರೇಶಕುಮಾರ್ ಹೇಳಿದರು.

ನಗರದ ರಥ ಮೈದಾನದ ಸಭಾಭವನದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ನೈಜ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸಲು ಪ್ರೋತ್ಸಾಹಿಸಬೇಕು. ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸುವ ದಿನಾಚರಣೆಗಳಲ್ಲಿ ಶಿಕ್ಷಕರ ದಿನಾಚರಣೆಯೂ ಪ್ರಮುಖವಾಗಿದೆ. ಸಮಾಜದಲ್ಲಿ ಶಿಕ್ಷಕರ ನಡೆ, ನುಡಿ ಹಾಗೂ ನಡವಳಿಕೆ ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳು ಶಿಕ್ಷಕರನ್ನು ಅನುಸರಿಸುತ್ತಾರೆ ಎಂದು ತಿಳಿಸಿದರು.

ನನ್ನ ತಾಯಿ ಶಾಲಾ ಶಿಕ್ಷಕಿಯಾಗಿದ್ದರು. ಶಾಲಾ ಶಿಕ್ಷಕಿಯ ಮಗನಾಗಿ ಕಾನೂನು ಸಚಿವ, ನಗರಾಭಿವೃದ್ಧಿ ಸಚಿವ ಹಾಗೂ ಶಿಕ್ಷಣ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಸಚಿವನಾಗಿ ನಿರ್ವಹಿಸಿದ ಖಾತೆಗಳಲ್ಲಿ ಶಿಕ್ಷಣ ಖಾತೆ ನನಗೆ ಅತ್ಯಂತ ಸಂತಸ ನೀಡಿತ್ತು ಎಂದು ಹೇಳಿದರು.

ಇಡೀ ದೇಶದಲ್ಲಿ ಕೋವಿಡ್ ಆವರಿಸಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ 10ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಮಕ್ಕಳಿಗೆ ಕೋವಿಡ್ ಹರಡದಂತೆ ಶಿಕ್ಷಕರು ಮುನ್ನೆಚ್ಚರಿಕೆ ವಹಿಸಿದ್ದರು. ಇದರ ಶ್ರೇಯಸ್ಸು ಶಿಕ್ಷಕರಿಗೆ ಸಲ್ಲುತ್ತದೆ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ಹಾಗೂ ಚಲನಚಿತ್ರ ನಟ ಜಗ್ಗೇಶ್ ಮಾತನಾಡಿ, ಗುರುವಿನ ಶಕ್ತಿ ಎಲ್ಲವನ್ನೂ ಮೀರಿಸುವ ಶಕ್ತಿಯಾಗಿದೆ. ಬ್ರಹ್ಮ, ವಿಷ್ಣು, ಮಹೇಶ್ವರರಿಗೂ ಮೀರಿಸುವಂತಹ ಶಕ್ತಿ ಗುರುಗಳಿಗಿದೆ. ಮನುಷ್ಯನ ಜೀವನದಲ್ಲಿ ‘ಮಾತೃದೇವೋಭವ’ ಹಾಗೂ ‘ಗುರುದೇವೋಭವ’ ಎಂದು ಕರೆಯುವುದು ಸುಮ್ಮನೆ ಅಲ್ಲ. ತಾಯಿ ಮತ್ತು ಗುರು ಇಬ್ಬರೂ ನಮ್ಮ ಜೀವನದ ಪ್ರಮುಖ ಶಕ್ತಿಗಳಾಗಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯ, ಹುಲಸೂರ ಮಠದ ಡಾ. ಶಿವಾನಂದ ಮಹಾಸ್ವಾಮಿ ಹಾಗೂ ಶಾಸಕ ಶರಣು ಸಲಗರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಪ್ರಕಾಶ್ ಕುದುರೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

Tags

Basavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X