Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಕಲ್ಯಾಣ | ಸಚಿವ ಧರ್ಮೇಂದ್ರ ಪ್ರಧಾನ್...

ಬಸವಕಲ್ಯಾಣ | ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂಥ್ ಮೊಮೆಂಟ್ ವತಿಯಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ20 July 2026 8:25 PM IST
share
ಬಸವಕಲ್ಯಾಣ | ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂಥ್ ಮೊಮೆಂಟ್ ವತಿಯಿಂದ ಮನವಿ

ಬಸವಕಲ್ಯಾಣ : ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿ ಪದೇ ಪದೇ ಸಂಭವಿಸುತ್ತಿರುವ ವೈಫಲ್ಯಗಳು, ವಿಶೇಷವಾಗಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾಲಿಡಾರಿಟಿ ಯೂಥ್ ಮೊಮೆಂಟ್ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಂಬಂಧಿತ ಪರೀಕ್ಷಾ ಅಕ್ರಮಗಳ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು. ಈ ಪ್ರಕರಣಗಳಲ್ಲಿ ಅಧಿಕಾರಿಗಳು, ಪರೀಕ್ಷಾ ಸಂಸ್ಥೆಗಳು, ಮಧ್ಯವರ್ತಿಗಳು ಹಾಗೂ ಸಂಘಟಿತ ಜಾಲಗಳ ಪಾತ್ರವನ್ನು ಸಮಗ್ರವಾಗಿ ಪರಿಶೀಲಿಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ, ಭ್ರಷ್ಟಾಚಾರ, ನಿರ್ಲಕ್ಷ್ಯ ಅಥವಾ ಪರೀಕ್ಷೆಯ ಗೌಪ್ಯತೆ ಕಾಪಾಡುವಲ್ಲಿ ವಿಫಲರಾದ ಎಲ್ಲ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಮತ್ತು ಇಲಾಖಾ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆರ್ಥಿಕ ನೆರವು, ಮಾನಸಿಕ ಸಮಾಲೋಚನಾ ಸೇವೆ ಹಾಗೂ ಅಗತ್ಯವಿದ್ದರೆ ಹೆಚ್ಚುವರಿ ಪರೀಕ್ಷಾ ಅವಕಾಶಗಳನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸೇರಿದಂತೆ ಎಲ್ಲಾ ಪರೀಕ್ಷಾ ಸಂಸ್ಥೆಗಳ ಕಾರ್ಯವೈಖರಿಯನ್ನು ಸ್ವತಂತ್ರವಾಗಿ ಪರಿಶೀಲಿಸಿ, ಪಾರದರ್ಶಕತೆ, ಸೈಬರ್ ಭದ್ರತೆ, ಪರೀಕ್ಷಾ ಗೌಪ್ಯತೆ, ವೃತ್ತಿಪರ ಹೊಣೆಗಾರಿಕೆ ಹಾಗೂ ಪರಿಣಾಮಕಾರಿ ದೂರು ನಿವಾರಣಾ ವ್ಯವಸ್ಥೆಯನ್ನು ಒಳಗೊಂಡ ಬಲಿಷ್ಠ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹಾಗೂ ನಾಗರಿಕರೊಂದಿಗೆ ಸರ್ಕಾರ ಅರ್ಥಪೂರ್ಣ ಸಂವಾದ ನಡೆಸಬೇಕು. ನ್ಯಾಯಸಮ್ಮತ ಬೇಡಿಕೆಗಳನ್ನು ಮಂಡಿಸುವ ಮತ್ತು ಶಾಂತಿಯುತ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸುವ ಸಂವಿಧಾನಬದ್ಧ ಹಕ್ಕನ್ನು ರಕ್ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂಧರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಿಯಾಝ್ ಪಟೇಲ್, ತಾಲೂಕು ಅಧ್ಯಕ್ಷ ಝಬಿವುಲ್ಲಾಖಾನ್, ಸಂಘಟನೆಯ ಉಪಾಧ್ಯಕ್ಷ ಶಹಬಾಜ್ ಖಾನ್, ಮಾಜ್ ಮಾಮು ಹಾಗೂ ಮುಬಾಶಿರ್ ಮಾಮು ಸೇರಿದಂತೆ ಹಲವರಿದ್ದರು.

Tags

Basavakalyana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X