ಬಸವಕಲ್ಯಾಣ | ಸಿಡಿಲು ಬಡಿದು ಎರಡು ಎಮ್ಮೆ ಸಾವು

ಬಸವಕಲ್ಯಾಣ : ತಾಲೂಕಿನ ಭೊಸಗಾ ಗ್ರಾಮದಲ್ಲಿ ರವಿವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಸಿಡಿಲು ಬಡಿದು ಎರಡು ಎಮ್ಮೆಗಳು ಮೃತಪಟ್ಟ ಘಟನೆ ನಡೆದಿದೆ.
ಭೊಸಗಾ ಗ್ರಾಮದ ಸೈಯದ್ ಎಂಬ ರೈತನಿಗೆ ಸೇರಿದ ಎಮ್ಮೆಗಳನ್ನು ಹೊಲದಲ್ಲಿನ ಮರದ ಕೆಳಗೆ ಕಟ್ಟಲಾಗಿತ್ತು. ಈ ವೇಳೆ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಎರಡು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಘಟನೆಯಿಂದ ರೈತ ಸೈಯದ್ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಕೃಷಿ ಕಾರ್ಯಗಳಿಗೆ ಆಧಾರವಾಗಿದ್ದ ಎಮ್ಮೆಗಳು ಮೃತಪಟ್ಟಿರುವುದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸ್ಥಳೀಯರು ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
Next Story




