Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಣ್ಣ ಮನುಕುಲದ ಸೂರ್ಯ : ಸಚಿವ ಈಶ್ವರ್...

ಬಸವಣ್ಣ ಮನುಕುಲದ ಸೂರ್ಯ : ಸಚಿವ ಈಶ್ವರ್ ಖಂಡ್ರೆ

ಸ್ವಾಭಿಮಾನಿ ಕಲ್ಯಾಣ ಪರ್ವದ ರಜತ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ24 Oct 2026 6:33 PM IST
share
ಬಸವಣ್ಣ ಮನುಕುಲದ ಸೂರ್ಯ : ಸಚಿವ ಈಶ್ವರ್ ಖಂಡ್ರೆ

ಬೀದರ್: ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆ ನೀಡಿದ ಬಸವಣ್ಣನವರು ಮನುಕುಲದ ಸೂರ್ಯನಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಬಸವಕಲ್ಯಾಣ ಪಟ್ಟಣದ ಸಸ್ತಾಪುರ ಬಂಗ್ಲಾ ಸಮೀಪದ ಎಂ.ಎಂ. ಬೇಗ್ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜ, ಅಕ್ಕ ನಾಗಲಾಂಬಿಕಾ ಮಹಿಳಾ ಗಣ ಹಾಗೂ ಸ್ವಾಭಿಮಾನಿ ತತ್ವನಿಷ್ಠ ಶರಣರ ವತಿಯಿಂದ ಶನಿವಾರ ಆಯೋಜಿಸಿದ್ದ ಸ್ವಾಭಿಮಾನಿ ಕಲ್ಯಾಣ ಪರ್ವದ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಕಲ್ಯಾಣದ ಅನುಭವ ಮಂಟಪದ ನಿರ್ಮಾಣಕ್ಕೆ ಸರ್ಕಾರದ ವತಿಯಿಂದ ಅನುದಾನ ಒದಗಿಸಲಾಗುತ್ತಿದೆ. ಅನುಭವ ಮಂಟಪದ 770 ಕಂಬಗಳ ಮೇಲೆ 770 ಶರಣರ ವಚನಗಳನ್ನು ಬರೆಸುವ ಮೂಲಕ ಅದನ್ನು ಮಾದರಿ ಕೇಂದ್ರವನ್ನಾಗಿ ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳವರು ಒಂದಾಗಿ ‘ಇವನಮ್ಮವ’ ಎಂಬ ಭಾವನೆಯೊಂದಿಗೆ ಬದುಕಬೇಕು. ಚನ್ನಬಸವಾನಂದ ಸ್ವಾಮೀಜಿ ಹಾಗೂ ಗಂಗಾ ಮಾತಾಜಿ ಒಂದಾಗಿ ಕಲ್ಯಾಣ ಪರ್ವ ನಡೆಸಿದರೆ ಅದು ಐಕ್ಯತೆಯ ಸಂದೇಶ ಸಾರಿದಂತಾಗುತ್ತದೆ ಎಂದು ಹೇಳಿದರು.

ಡಾ. ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ಬಸವಕಲ್ಯಾಣ ಪಟ್ಟಣದ ಪರುಷ ಕಟ್ಟೆ ಇಂದಿಗೂ ಅಭಿವೃದ್ಧಿ ಕಾಣದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಜಾಗತಿಕ ಮಟ್ಟದಲ್ಲಿ ಗುರುಬಸವಣ್ಣನವರ ‘ಇವನಮ್ಮವ’ ಎಂಬ ಸಂದೇಶವನ್ನು ಸಾರದಿದ್ದರೆ ಬಸವತತ್ವಕ್ಕೆ ಉಳಿಗಾಲವಿಲ್ಲ. ವೈಯಕ್ತಿಕ ಸ್ವಾರ್ಥ ಮತ್ತು ಹಿತಾಸಕ್ತಿಗಳನ್ನು ಬದಿಗಿಟ್ಟು ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಹೋರಾಡದಿದ್ದರೆ ಮಾತಾಜಿಯವರ ಶ್ರಮ ವ್ಯರ್ಥವಾಗುತ್ತದೆ. ಇದಕ್ಕೆ ಅವರ ನಿಜವಾದ ಅನುಯಾಯಿಗಳಾದ ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದರು.

ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಮಾತನಾಡಿ, ಮಾತೆ ಮಹಾದೇವಿ ಅವರಂತಹ ಧರ್ಮಪ್ರಚಾರಕರು ಮತ್ತೊಬ್ಬರಿಲ್ಲ. ಬಸವಣ್ಣನವರ ವಚನಗಳನ್ನು ಮನೆಮನೆಗೆ ತಲುಪಿಸಿದ ಕ್ರಾಂತಿಯ ಕುಡಿ ಅವರಾಗಿದ್ದರು. ಅವರು ಕಟ್ಟಿದ ಸಂಸ್ಥೆಯಲ್ಲಿ ಇಂದು ಸ್ವಾರ್ಥಿಗಳು ತುಂಬಿಕೊಂಡು ಅದನ್ನು ಹಾಳುಗೆಡವುತ್ತಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಾತಾಜಿಯವರು ಆರಂಭಿಸಿದ ಸ್ವತಂತ್ರ ಧರ್ಮದ ಹೋರಾಟ ಮುಂದುವರಿಯಬೇಕು. ಮಾತಾಜಿಯವರು ಸಂಪಾದಿಸಿದ ಭೌತಿಕ ಆಸ್ತಿ ಚನ್ನಬಸವಾನಂದ ಸ್ವಾಮೀಜಿ ಅವರಿಗೆ ಸಿಗದಿರಬಹುದು. ಆದರೆ, ಅವರ ಆಶೀರ್ವಾದವೆಂಬ ಸಂಪತ್ತು ಸದಾ ಅವರೊಂದಿಗಿದೆ ಎಂದರು.

ಬಸವಕಲ್ಯಾಣ ಬಸವ ಮಹಾಮನೆಯ ಡಾ. ಸಿದ್ಧರಾಮ ಬೆಲ್ದಾಳ ಶರಣರು ದಿವ್ಯ ಸಾನ್ನಿಧ್ಯ ವಹಿಸಿ, ಸಾಮೂಹಿಕ ಪ್ರಾರ್ಥನಾ ಕೃತಿಯನ್ನು ಬಿಡುಗಡೆಗೊಳಿಸಿದರು. ಧಾರವಾಡದ ಅಬ್ದುಲ್ ರಜಾಕ್ ಖಾದ್ರಿ ಸತ್ತೂರು ಅವರು ‘ವಚನ ಚಿಂತನೆ’ ದಿನಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಚಿತ್ರದುರ್ಗದ ತರಂಗಿಣಿ ಅವರ ನೃತ್ಯ ಪ್ರದರ್ಶನ ಸಭಿಕರ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಚಿಕ್ಕಮಗಳೂರಿನ ಡಾ. ಜಯಬಸವಾನಂದ ಸ್ವಾಮಿ, ಆಂಧ್ರಪ್ರದೇಶದ ಬಸವೇಶ್ವರ ಸ್ವಾಮಿ, ಗುರುಸ್ವಾಮಿ, ಸತ್ಯಾದೇವಿ ಮಾತಾಜಿ, ಶಾಂತಾದೇವಿ ಮಾತಾಜಿ, ವಚನಶ್ರೀ ಮಾತಾಜಿ, ಭೀಮರಾವ್ ಬಿರಾದಾರ್, ಮಧು ಇಟಕ್ಯಾಳ್, ಡಾ. ಮಹೇಶ್ ಬಿರಾದಾರ್, ಬೆಳಗಾವಿಯ ಅಶೋಕ್ ಬೆಂಡಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಸವರಾಜ್ ಪಾಟೀಲ್ ಶಿವಪುರ ಸ್ವಾಗತಿಸಿದರು. ಬಸವರಾಜ್ ಸಂಗಮದ ನಿರೂಪಿಸಿದರು. ಪ್ರಾರ್ಥನಾ ಚಟನಳ್ಳಿ ವಂದಿಸಿದರು.

Tags

Ishwar KhandreBasavanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X