Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಬಿಜೆಪಿ ಕಾರ್ಯಕರ್ತರ ವಿರುದ್ಧ...

Bhalki | ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ಆರೋಪ: ಧನ್ನೂರ್ ಪೊಲೀಸ್ ಠಾಣೆ ಎದುರು ಧರಣಿ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ18 Nov 2026 7:59 PM IST
share
Bhalki | ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ಆರೋಪ: ಧನ್ನೂರ್ ಪೊಲೀಸ್ ಠಾಣೆ ಎದುರು ಧರಣಿ

ಭಾಲ್ಕಿ: ಸಣ್ಣ ವೈಯಕ್ತಿಕ ಗಲಾಟೆಗೆ ರಾಜಕೀಯ ಬಣ್ಣ ನೀಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ, ಪೊಲೀಸ್ ಕ್ರಮವನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಭಾಲ್ಕಿ ತಾಲೂಕಿನ ಧನ್ನೂರ್ ಪೊಲೀಸ್ ಠಾಣೆ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಧನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದೇಶ್ವರ್ ವಾಡಿ ಗ್ರಾಮದಲ್ಲಿ ಹೊಲಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಈ ಪ್ರಕರಣದಲ್ಲಿ ಒಂದು ಗುಂಪಿನ ಐವರನ್ನು ಜೈಲಿಗೆ ಕಳುಹಿಸಲಾಗಿದೆ. ಇದನ್ನು ವಿರೋಧಿಸಿದ ಪ್ರತಿಭಟನಾಕಾರರು, ವೈಯಕ್ತಿಕ ಗಲಾಟೆಯನ್ನು ನೆಪವಾಗಿಸಿಕೊಂಡು ರಾಜಕೀಯ ಪ್ರಭಾವ ಬಳಸಿ ಒಂದು ಗುಂಪಿನವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೀದರ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಸಚಿವ ಈಶ್ವರ್ ಖಂಡ್ರೆ ಅವರ ರಾಜಕೀಯ ಪ್ರಭಾವ ಬಳಸಿ ವಿರೋಧ ಪಕ್ಷದ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ವೈಯಕ್ತಿಕ ಗಲಾಟೆಗಳನ್ನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನಿನ ಚೌಕಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಸಿದ್ದೇಶ್ವರ್ ವಾಡಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವುದರ ಜತೆಗೆ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣಗಳ ಬೆದರಿಕೆಗೆ ಬಿಜೆಪಿ ಕಾರ್ಯಕರ್ತರು ಎದೆಗುಂದುವುದಿಲ್ಲ. ರಾಜಕೀಯ ದ್ವೇಷದ ಮೂಲಕ ಧ್ವನಿ ಅಡಗಿಸುವ ಪ್ರಯತ್ನಗಳಿಗೆ ಮಣಿಯದೆ ಅನ್ಯಾಯದ ವಿರುದ್ಧ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಪ್ರಕಾಶ್ ಖಂಡ್ರೆ ಸೇರಿದಂತೆ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮಂಡಲ ಅಧ್ಯಕ್ಷ ವೀರಣ್ಣ ಕಾರಬಾರಿ, ಶಿವರಾಜ್ ಗಂದಗೆ, ಬಾಬುರಾವ್ ಕಾರಬಾರಿ, ಶಶಿ ಹೊಸಳ್ಳಿ, ಶ್ರೀಕಾಂತ್ ದಾನಿ, ಗಂಗಾಧರ್ ಹೊಸಳ್ಳಿ, ಸೂರ್ಯಕಾಂತ್ ಜಮಶೆಟ್ಟಿ, ಜೈಭೀಮ್ ಬಂದು, ಸಂಗಮೇಶ್ ಕಾರಮುಂಗೆ, ಸಿದ್ದು ಕಾಡದೇ, ಸುರೇಶ್ ಕಾನೆಕರ್, ಸಂಜು ಸಿಂಧೆ, ರೇವಣಸಿದ್ಧ ಜಾಡರ್, ಡಾ. ಮಹೇಶ್ ಭಾಲ್ಕಿ, ಮಹೇಶ್ ಸ್ವಾಮಿ, ಶ್ರೀಧರ್ ಶಿರಸಿ, ಓಂಕಾರ್ ಶಾರದೆ, ಡಾ. ಜಗದೀಶ್ ಭೂರೆ, ಲಕ್ಷ್ಮಣ ಮುದಾಳೆ, ಸಂತೋಷ್ ಪಾಟೀಲ್ ಹಾಗೂ ಚಂದ್ರಕಾಂತ್ ಕಾರಬಾರಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

police stationprotestBJPBhalki
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X