ಭಾಲ್ಕಿ | ಹೃದಯಾಘಾತದಿಂದ ಮುಖ್ಯ ಶಿಕ್ಷಕ ಮೃತ್ಯು

ಭಾಲ್ಕಿ : ಶಾಲೆಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಲ್ಲಿ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಬಾಜೋಳಗಾ ಗ್ರಾಮದ ನಿವಾಸಿ, ಲಂಜವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸೂರ್ಯಕಾಂತ ಅಮದಾಬಾದೆ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬಾಜೋಳಗಾದಲ್ಲಿ ಶನಿವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story





