Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಹೆಚ್‌ಆರ್‌ಎಂಎಸ್ ಪೋರ್ಟಲ್‌ಗೆ...

Bhalki | ಹೆಚ್‌ಆರ್‌ಎಂಎಸ್ ಪೋರ್ಟಲ್‌ಗೆ ಆಧಾರ್ ಲಿಂಕ್ ಮಾಡಿಸಿ : ಚಂದ್ರಶೇಖರ್ ಬನ್ನಾಳೆ

ವಾರ್ತಾಭಾರತಿವಾರ್ತಾಭಾರತಿ24 Sept 2026 6:10 PM IST
share
Bhalki | ಹೆಚ್‌ಆರ್‌ಎಂಎಸ್ ಪೋರ್ಟಲ್‌ಗೆ ಆಧಾರ್ ಲಿಂಕ್ ಮಾಡಿಸಿ : ಚಂದ್ರಶೇಖರ್ ಬನ್ನಾಳೆ

ಭಾಲ್ಕಿ: ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನೌಕರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್ (HRMS) ಪೋರ್ಟಲ್‌ನಲ್ಲಿ ಲಿಂಕ್ ಮಾಡಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಬನ್ನಾಳೆ ತಿಳಿಸಿದ್ದಾರೆ.

ಪ್ರಕಟಣೆ ಮೂಲಕ ಮಾಹಿತಿ ನೀಡಿದ ಅವರು, ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ (KASS) ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಈ ಯೋಜನೆಯ ಸೌಲಭ್ಯ ಪಡೆಯಲು ಹೆಚ್‌ಆರ್‌ಎಂಎಸ್ ಪೋರ್ಟಲ್‌ನಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರ ಆಧಾರ್ ಸಂಖ್ಯೆ ಲಿಂಕ್ ಆಗಿರುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡಿದ ನೌಕರರು ಮತ್ತು ಅವರ ಕುಟುಂಬದವರು ಮಾತ್ರ ಕ್ಯಾಶ್‌ಲೆಸ್ ವೈದ್ಯಕೀಯ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಕೂಡ ಎಲ್ಲ ಸರ್ಕಾರಿ ನೌಕರರು ತಮ್ಮ ಕುಟುಂಬದ ಸದಸ್ಯರ ವಿವರಗಳನ್ನು ಹೆಚ್‌ಆರ್‌ಎಂಎಸ್ ಪೋರ್ಟಲ್‌ನಲ್ಲಿ ದಾಖಲಿಸುವಂತೆ ಮನವಿ ಮಾಡಿದ್ದಾರೆ ಎಂದು ಅವರು ಹೇಳಿದರು.

ಭಾಲ್ಕಿ ತಾಲೂಕಿನಲ್ಲಿ ಒಟ್ಟು 1,760 ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇದುವರೆಗೆ ಸಾವಿರಕ್ಕೂ ಅಧಿಕ ನೌಕರರು ತಮ್ಮ ಕುಟುಂಬ ಸದಸ್ಯರ ಮಾಹಿತಿಯನ್ನು ಪೋರ್ಟಲ್‌ನಲ್ಲಿ ನೋಂದಾಯಿಸಿಲ್ಲ ಎಂದು ತಿಳಿಸಿದರು. ಇದರಿಂದ ಆಧಾರ್ ಲಿಂಕ್ ಮಾಡದ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಸಂಜೀವಿನಿ ಯೋಜನೆಯ ನಗದುರಹಿತ ಚಿಕಿತ್ಸಾ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮುಂದಿನ ಕೆಲ ದಿನಗಳಲ್ಲಿ HRMS Portal 1.0 ಸ್ಥಗಿತಗೊಳ್ಳಲಿರುವುದರಿಂದ, ಆಧಾರ್ ಲಿಂಕ್ ಮಾಡದ ಎಲ್ಲಾ ನೌಕರರು ತಕ್ಷಣವೇ ತಮ್ಮ ಕುಟುಂಬ ಸದಸ್ಯರ ಆಧಾರ್ ಸಂಖ್ಯೆಯನ್ನು ಹೆಚ್‌ಆರ್‌ಎಂಎಸ್ ಪೋರ್ಟಲ್‌ನಲ್ಲಿ ಲಿಂಕ್ ಮಾಡಿ ಆರೋಗ್ಯ ಸಂಜೀವಿನಿ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಂದ್ರಶೇಖರ್ ಬನ್ನಾಳೆ ಮನವಿ ಮಾಡಿದ್ದಾರೆ.

Tags

HRMS portalAadhaarBhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X