Bhalki | ಶಿಕ್ಷಕರ ಬೆಂಬಲದಿಂದ ಶಶಿಲ್ ನಮೋಶಿ ಗೆಲುವು ಖಚಿತ: ಪ್ರಕಾಶ್ ಖಂಡ್ರೆ

ಭಾಲ್ಕಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರ ಗೆಲುವು ಖಚಿತವಾಗಿದೆ ಎಂದು ಮಾಜಿ ಶಾಸಕ ಪ್ರಕಾಶ್ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ಶಶಿಲ್ ನಮೋಶಿ ಪರವಾಗಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕ ಸಮುದಾಯದ ಬೆಂಬಲದೊಂದಿಗೆ ಬಿಜೆಪಿ ಮತ್ತೊಮ್ಮೆ ವಿಜಯ ಸಾಧಿಸಲಿದೆ ಎಂದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮಾಜಿ ಸಭಾಪತಿ ರಘುನಾಥ್ ಮಲ್ಕಾಪೂರೆ, ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ, ರಾಜಶೇಖರ್ ನಾಗಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿರಪ್ಪಾ ಔರಾದೆ, ಜಿಲ್ಲಾ ಉಪಾಧ್ಯಕ್ಷ ಸುಭಾಷ್ ಬಿರಾದಾರ್, ಜಿಲ್ಲಾ ಕಾರ್ಯದರ್ಶಿ ಗೋವಿಂದರಾವ್ ಬಿರಾದಾರ್ ಹಾಗೂ ಲುಂಬಿಣಿ ಗೌತಮ್ ಸೇರಿದಂತೆ ಜಿಲ್ಲೆಯ ಮತ್ತು ತಾಲೂಕಿನ ಪಕ್ಷದ ಪದಾಧಿಕಾರಿಗಳು, ಘಟನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲದ ಪ್ರಧಾನ ಕಾರ್ಯದರ್ಶಿ ರೇವಣಸಿದ್ದ ಜಾಡರ್ ಸ್ವಾಗತಿಸಿ, ನಿರೂಪಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಡಾ. ಮಹೇಶ್ ಭಾಲ್ಕೆ ವಂದಿಸಿದರು.




