Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಕನ್ನಡ ಭಾಷೆ ಕನ್ನಡಿಗರ...

Bhalki | ಕನ್ನಡ ಭಾಷೆ ಕನ್ನಡಿಗರ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ: ಗುರುಬಸವ ಪಟ್ಟದೇವರು

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ23 Nov 2026 6:44 PM IST
share
Bhalki | ಕನ್ನಡ ಭಾಷೆ ಕನ್ನಡಿಗರ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ: ಗುರುಬಸವ ಪಟ್ಟದೇವರು

ಭಾಲ್ಕಿ: ಕನ್ನಡ ಕೇವಲ ಸಂವಹನದ ಭಾಷೆಯಲ್ಲ, ಅದು ಕನ್ನಡಿಗರ ಇತಿಹಾಸ, ಸಂಸ್ಕೃತಿ ಮತ್ತು ವಿಶಿಷ್ಟ ಗುರುತಿನ ಅಸ್ಮಿತೆಯಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದೇವರು ಹೇಳಿದರು.

ನಗರದ ಚನ್ನಬಸವಾಶ್ರಮದ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ರವಿವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ, ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಜಯಂತಿ ಹಾಗೂ 327ನೇ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಭಾಷೆ ಉಳಿದರೆ ಸಂಸ್ಕೃತಿ ಮತ್ತು ಪರಂಪರೆಯೂ ಉಳಿಯುತ್ತದೆ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಹಿರಿಯರು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಕನ್ನಡದ ಉಳಿವಿಗಾಗಿ ಹೋರಾಡಿದ್ದಾರೆ. ಅನೇಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಇಂದು ಅಂತಹ ಪರಿಸ್ಥಿತಿ ಇಲ್ಲದಿದ್ದರೂ ನಮ್ಮ ಮನೆಗಳಲ್ಲಿಯೇ ಕನ್ನಡ ಭಾಷೆ ಮಾಯವಾಗುತ್ತಿದೆ. ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಯಲ್ಲಿ ಕನ್ನಡ ಮಾತನಾಡಿದರೆ ಭಾಷೆ ಉಳಿಯುತ್ತದೆ ಮತ್ತು ಬೆಳೆಯುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್. ಪಾಟೀಲ್ ಮಾತನಾಡಿ, ಪ್ರತಿಯೊಬ್ಬ ಕನ್ನಡಿಗರು ಕನ್ನಡ ಭಾಷೆಯಲ್ಲಿಯೇ ವ್ಯವಹರಿಸುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.

ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ್ ಹಲ್ಮಂಡಗೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪ್ರಮುಖರಾದ ಸಂತೋಷ್ ಬಿ.ಜಿ. ಪಾಟೀಲ್, ಸಂಗಮೇಶ್ ಗುಮ್ಮೆ, ಸಂಜುಕುಮಾರ್ ನಾವದಗಿ, ಗೋರಕ್ ಶ್ರೀಮಾಳೆ, ರಾಜಕುಮಾರ್ ಡಾವರಗಾಂವೆ, ಚಂದು ಸಂಪಂಗೆ, ಚಂದ್ರಕಾಂತ್ ಸಂಪಂಗೆ, ಮಾಳಸ್ಕಾಂತ್ ವಾಘೆ, ಚಂದ್ರಕಲಾ ಪ್ರಭು ಡಿಗ್ಗೆ, ಸಿದ್ರಾಮಯ್ಯ ಸ್ವಾಮಿ, ಕೈಲಾಸ್ ಹಿರೇಮಠ್, ಬಸವರಾಜ್ ಕಾರಬಾರಿ, ಬಂಡೆಪ್ಪ ಕರಸಣ್ಣ, ರಾಹುಲ್ ಸಿಂಧೆ, ಸಂತೋಷ್ ನಾಟೇಕರ್, ಪ್ರವೀಣ್ ಮೋರೆ, ತುಕಾರಾಮ್ ಕಾಸ್ಲೆ ಹಾಗೂ ಸುದೀಪ್ ತುಗಾಂವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೀಪಕ್ ಠಮಕೆ ಕಾರ್ಯಕ್ರಮ ನಿರೂಪಿಸಿದರು. ಗುರುಪ್ರಸಾದ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಪಿ.ಕೆ. ಪ್ರಭು ವಚನ ಗಾಯನ ನಡೆಸಿಕೊಟ್ಟರು.

Tags

BhalkiKannadahistorycultureGurubasava Pattadevaru
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X