Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಸತ್ಯ, ಪ್ರಾಮಾಣಿಕತೆ,...

Bhalki | ಸತ್ಯ, ಪ್ರಾಮಾಣಿಕತೆ, ಕಾಯಕನಿಷ್ಠೆಯೇ ಶಾಶ್ವತ ಯಶಸ್ಸಿಗೆ ಅಡಿಪಾಯ: ಬಸವಲಿಂಗ ಪಟ್ಟದೇವರು

ಚನ್ನಬಸವೇಶ್ವರ ಗುರುಕುಲದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ9 Nov 2026 7:06 PM IST
share
Bhalki | ಸತ್ಯ, ಪ್ರಾಮಾಣಿಕತೆ, ಕಾಯಕನಿಷ್ಠೆಯೇ ಶಾಶ್ವತ ಯಶಸ್ಸಿಗೆ ಅಡಿಪಾಯ: ಬಸವಲಿಂಗ ಪಟ್ಟದೇವರು

ಭಾಲ್ಕಿ: ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ಸತ್ಯ, ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯನ್ನು ಎಂದಿಗೂ ಮರೆಯಬಾರದು. ನಿರಂತರ ಪರಿಶ್ರಮ ಹಾಗೂ ಶುದ್ಧ ನಡವಳಿಕೆಯೇ ಶಾಶ್ವತ ಯಶಸ್ಸಿಗೆ ಅಡಿಪಾಯ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.

ತಾಲೂಕಿನ ಚನ್ನಬಸವೇಶ್ವರ ಗುರುಕುಲದಲ್ಲಿ ಸೋಮವಾರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಆಯೋಜಿಸಿದ್ದ ಗೌರವ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಅಪಾರ ಕಾಯಕನಿಷ್ಠೆ, ಸತ್ಯಶುದ್ಧ ನಡೆ ಹಾಗೂ ನಿರಂತರ ಪರಿಶ್ರಮದಿಂದ ಸಾಧಕರು ಇಂದು ಉನ್ನತ ಸ್ಥಾನ ತಲುಪಿರುವುದು ಹೆಮ್ಮೆಯ ಸಂಗತಿ. ವಿಶ್ವಗುರು ಬಸವಣ್ಣನವರು ಸಾರಿದ ‘ಸತ್ಯವ ನುಡಿಯುವುದೇ ದೇವಲೋಕ, ಮಿಥ್ಯವ ನುಡಿಯುವುದೇ ಮರ್ತ್ಯಲೋಕ’ ಎಂಬ ವಚನದ ಆಶಯದಂತೆ ಸತ್ಯ ಮತ್ತು ಪ್ರಾಮಾಣಿಕತೆಯ ಹಾದಿಯಲ್ಲಿ ಮುನ್ನಡೆದು ಸಮಾಜಕ್ಕೆ ಮಾದರಿಯಾಗಿರುವ ಸಾಧಕರ ಯಶಸ್ಸು ಕೇವಲ ವೈಯಕ್ತಿಕ ಸಾಧನೆಯಲ್ಲ; ಅದು ಇಡೀ ಶರಣ ಸಂಕುಲ ಹಾಗೂ ನಾಡಿನ ಗೌರವವೂ ಆಗಿದೆ ಎಂದರು.

ಬಸವಗುರುಗಳ ‘ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ’ ಎಂಬ ವಚನದ ಆಶಯದಂತೆ ಕಾಯಕ ಮತ್ತು ಸೇವೆಯ ಮೂಲಕ ಸಮಾಜದ ಪ್ರೀತಿ, ವಿಶ್ವಾಸ ಗಳಿಸಿರುವ ಸಾಧಕರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಅವರ ಜ್ಞಾನ, ಅನುಭವ ಹಾಗೂ ಸಾಧನೆ ಮುಂದಿನ ಪೀಳಿಗೆಯ ಯುವಜನತೆಗೆ ಸ್ಫೂರ್ತಿಯ ಸೆಲೆಯಾಗಬೇಕು ಎಂದು ಹಾರೈಸಿದರು.

ಉಪಕುಲಸಚಿವ ಡಾ. ರೇವಣಸಿದ್ದಪ್ಪ ಬಿ. ಪಾಟೀಲ್ ಮಾತನಾಡಿ, ಗಡಿಭಾಗದಲ್ಲಿ ಪರಮಪೂಜ್ಯರು ಸಲ್ಲಿಸುತ್ತಿರುವ ಶೈಕ್ಷಣಿಕ ಸೇವೆ ಅನನ್ಯವಾದುದು. ಶಿಕ್ಷಣದ ಮೂಲಕ ಶ್ರೀಗಳು ಮಹತ್ತರ ಕಾರ್ಯ ಮಾಡುತ್ತಿದ್ದಾರೆ. ಗುರುಕುಲವೆಂಬ ಜ್ಞಾನದ ನೆರಳಿನಲ್ಲಿ ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಡಾ.ಸಂದೀಪ್ ಹರ್ಷಂಗಿ, ಉಪಕುಲಸಚಿವ ಡಾ.ರೇವಣಸಿದ್ದಪ್ಪ ಬಿ.ಪಾಟೀಲ್, ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಜಗನ್ನಾಥ್ ಹಲಮಡಗಿ, ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ್ ಸೋಮಶೆಟ್ಟಿ ಹಾಗೂ ಶಾಂತಾಬಾಯಿ ಕಾಂಬಳೆ, ಎನ್‌ಡಿಎ ಸಾಧಕರಾದ ಅಂಕಿತರೆಡ್ಡಿ ರವೀಂದ್ರರೆಡ್ಡಿ, ನರೇಂದ್ರರೆಡ್ಡಿ ಸತ್ಯನಾರಾಯಣರೆಡ್ಡಿ, ಸುದರ್ಶನ್ ಸುಧಾಕರ್, ಅಭಿಷೇಕ್ ಹಾಗೂ ಆರ್‌ಎಂಒ ಸಾಧಕ ಪ್ರಿಯಾಂಶು ರಾಜು ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗುರುಬಸವ ಪಟ್ಟದೇವರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಮೋಹನರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಶಶಿಧರ್ ಕೋಸಂಬೆ ಅವರು ಬಸವಗುರು ಪೂಜೆ ನೆರವೇರಿಸಿದರು. ಪ್ರಾಚಾರ್ಯ ಬಸವರಾಜ್ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮದನ ಗಾಂವಕರ್ ನಿರೂಪಿಸಿದರು. ಸಿದ್ರಾಮ್ ಗೊಗ್ಗಾ ವಂದಿಸಿದರು.

Tags

Bhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X