ಬೀದರ್ | ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಅಭಿಯಾನದಡಿ 138 ಪ್ರಕರಣ ಇತ್ಯರ್ಥ : ನ್ಯಾ.ಪ್ರಕಾಶ್ ಅರ್ಜುನ್ ಬನಸೋಡೆ

ಬೀದರ್ : ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಾಚರಣೆ ಅಭಿಯಾನದಡಿ 138 ಪ್ರಕರಣ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಅರ್ಜುನ್ ಬನಸೋಡೆ ಅವರು ತಿಳಿಸಿದರು.
ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಭಾಂಗಣದಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಷ್ಟೀಯ ಕಾನೂನು ಸೇವೆಗಳ ಪ್ರಾಧಿಕಾರವು ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಅಭಿಯಾನವನ್ನು ದೇಶದಾದ್ಯಂತ ಪ್ರಾರಂಭಿಸಲಾಯಿತು. ಅದರಂತೆ ಬೀದರ್ ಜಿಲ್ಲೆಯಲ್ಲಿ ಜು.1 ರಿಂದ ಅ.6ರ ವರೆಗೆ 90 ದಿನಗಳಲ್ಲಿ ಮಧ್ಯಸ್ಥಿಕೆ ಮೂಲಕ ವಿವಿಧ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.
ವೈವಾಹಿಕ ವಿವಾದ, ಕೌಟುಂಬಿಕ ದೌರ್ಜನ್ಯ, ಅಪಘಾತದ ಹಕ್ಕುಗಳು, ಚೆಕ್ ಬೌನ್ಸ್, ವಾಣಿಜ್ಯ ವಿವಾದ, ಗ್ರಾಹಕ ವಿವಾದ, ಭೂಸ್ವಾಧೀನ ಸೇರಿದಂತೆ ವಿವಿಧ 138 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Next Story





