Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ ಜಿಲ್ಲೆಯಲ್ಲಿ 20 ಲಕ್ಷ ಮಾನವ ದಿನ...

ಬೀದರ್‌ ಜಿಲ್ಲೆಯಲ್ಲಿ 20 ಲಕ್ಷ ಮಾನವ ದಿನ ಸೃಜನೆ: ಸಚಿವ ಈಶ್ವರ್‌ ಖಂಡ್ರೆ

ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ 10 ಕೋಟಿ ರೂ. ಮಂಜೂರು

ವಾರ್ತಾಭಾರತಿವಾರ್ತಾಭಾರತಿ5 Oct 2026 10:29 PM IST
share
ಬೀದರ್‌ ಜಿಲ್ಲೆಯಲ್ಲಿ 20 ಲಕ್ಷ ಮಾನವ ದಿನ ಸೃಜನೆ: ಸಚಿವ ಈಶ್ವರ್‌ ಖಂಡ್ರೆ

ಬೀದರ್ : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜು.1ರಿಂದ ಬೀದರ್ ಜಿಲ್ಲೆಯಲ್ಲಿ 20 ಲಕ್ಷ ಮಾನವ ದಿನ ಸೃಜಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.150ರಷ್ಟು ಹೆಚ್ಚಳವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಇದೇ ಅವಧಿಯಲ್ಲಿ ಮನರೇಗಾ ಅಡಿಯಲ್ಲಿ 7 ಲಕ್ಷ ಮಾನವ ದಿನ ಸೃಷ್ಟಿ ಮಾಡಲಾಗಿತ್ತು. ಆದರೆ, ಈ ವರ್ಷ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ 13 ಲಕ್ಷ ಮಾನವ ದಿನ ಹೆಚ್ಚಳವಾಗಿದೆ ಎಂದರು.

ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೂರಿದ್ದು, ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ಹೋಗುತ್ತಿದ್ದ ಗ್ರಾಮೀಣ ಬಡಜನರು, ಮಹಿಳೆಯರು, ದುರ್ಬಲರು, ವಂಚಿತರು, ಭೂರಹಿತ ಕೂಲಿ ಕಾರ್ಮಿಕರಿಗೆ ಇರುವ ಸ್ಥಳದಲ್ಲಿಯೇ ಉದ್ಯೋಗ ಒದಗಿಸಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 1.75 ಕೋಟಿ ಮಾನವ ದಿನ ಸೃಜನೆ ಮಾಡಲಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಗುಳೆ ಹೋಗದಂತೆ ತಡೆಯಲು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೆರವಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ ನರೇಗಾದ 90:10 ಅನುಪಾತವನ್ನು ಬದಲಾಯಿಸಿ 60:40 ಅನುಪಾತ ಮಾಡಿದ್ದು, ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಹೊರೆ ಆಗುತ್ತಿದ್ದರೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಯಶಸ್ವಿಯಾಗಿ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ಅಂತರ್ಜಲ ಮಟ್ಟ ಹೆಚ್ಚಿಸಲು ಕೊಳವೆ ಬಾವಿ ಮರುಪೂರಣಕ್ಕೂ ಅವಕಾಶ : ಅಂತರ್ಜಲ ಮಟ್ಟ ದೇಶಾದ್ಯಂತ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಅಂತರ್ಜಲ ಮಟ್ಟ ಹೆಚ್ಚಿಸಲು ವೈಯಕ್ತಿಕ ಕೊಳವೆ ಬಾವಿಗಳಿಗೂ ಮರುಪೂರಣ (ರೀಚಾರ್ಜ್ ಪಿಟ್) ಮಾಡಿಸಲು ಈ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ದನದ ಕೊಟ್ಟಿಗೆ, ಕುರಿ-ಮೇಕೆ ಕೊಟ್ಟಿಗೆ, ಚೆಕ್ ಡ್ಯಾಂ, ಶಾಲಾ ಕೊಠಡಿ, ಅಂಗನವಾಡಿ ನಿರ್ಮಾಣಕ್ಕೂ ಅವಕಾಶವಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆಸ್ತಿ ಸೃಜನೆ ಮಾಡಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ದಿನಾಲೂ 382 ರೂ. ಹಣ ಪಡೆದು, ಶ್ರಮದಾನ ಮಾಡಿದರೆ ಗ್ರಾಮೀಣ ವಿಕಾಸವಾಗುತ್ತದೆ ಎಂದರು.

ಹೊಸದಾಗಿ ಜಾಬ್ ಕಾರ್ಡ್ ವಿತರಣೆ: ಹಲವರ ಜಾಬ್ ಕಾರ್ಡ್ ನಿಷ್ಕ್ರಿಯವಾಗಿತ್ತು. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಬರ ಪರಿಸ್ಥಿತಿಯ ಕಾಲದಲ್ಲಿ ಉದ್ಯೋಗ ಒದಗಿಸಲು ಜಾಬ್ ಕಾರ್ಡ್ ಮೇಳ ನಡೆಸಲು ಸೂಚಿಸಿದ ಪರಿಣಾಮ ಬೀದರ್ ಜಿಲ್ಲೆಯೊಂದರಲ್ಲೇ 26 ಸಾವಿರ ಕುಟುಂಬಗಳು ಹೊಸದಾಗಿ ಜಾಬ್ ಕಾರ್ಡ್ ಮಾಡಿಸಿಕೊಂಡಿವೆ ಎಂದು ಅವರು ತಿಳಿಸಿದರು.

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ. ಬೀದರ್ ಜಿಲ್ಲೆಗೆ ಕುಡಿಯುವ ನೀರಿಗಾಗಿ 10 ಕೋಟಿ ರೂ. ಮಂಜೂರು ಮಾಡಲಾಗಿದೆ. ಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಈಗಿನಿಂದಲೇ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ದೇಶದ್ರೋಹಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ : ಭಾಲ್ಕಿ ತಾಲೂಕಿನ ಏಣಕುರ್‌ ಗ್ರಾಮದ ಯುವಕನ ಜೊತೆಗೆ ಭಯೋತ್ಪಾದಕ ಸಂಘಟನೆಗಳ ಜೊತೆಗೆ ನಂಟಿನ ಶಂಕೆಯ ಬಗ್ಗೆ ಪ್ರತಿಕ್ರಿಯೇ ನೀಡಿದ ಅವರು, ಯಾರೇ ದೇಶದ್ರೋಹದ ಕಾರ್ಯ ಮಾಡಿದ್ದರೆ, ನಿಷ್ಪಕ್ಷಪಾತ ತನಿಖೆಯಾಗುತ್ತದೆ. ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುತ್ತದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಅನಾದಿಕಾಲದಿಂದಲೂ ಸಮಾಜದಲ್ಲಿ ಸಮಾಜಘಾತುಕ ಶಕ್ತಿಗಳು ಇದ್ದೇ ಇವೆ. ಇಂತಹವರನ್ನು ನಿಗ್ರಹಿಸುವುದು ನಿರಂತರ ಪ್ರಕ್ರಿಯೆ, ಅದನ್ನು ಪೊಲೀಸ್ ಇಲಾಖೆ ಮಾಡುತ್ತದೆ ಎಂದು ತಿಳಿಸಿದರು.

Tags

BidarEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X