Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮೂರು ತಿಂಗಳಲ್ಲಿ ಸರಕಾರಕ್ಕೆ...

ಬೀದರ್ | ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ವರದಿ ಸಲ್ಲಿಸಲಾಗುವುದು : ಪ್ರೊ.ಗೋವಿಂದರಾವ್

ವಾರ್ತಾಭಾರತಿವಾರ್ತಾಭಾರತಿ9 Jun 2025 8:53 PM IST
share
ಬೀದರ್ | ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ವರದಿ ಸಲ್ಲಿಸಲಾಗುವುದು : ಪ್ರೊ.ಗೋವಿಂದರಾವ್

ಬೀದರ್ : ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ವರದಿ ಸಲ್ಲಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಪ್ರೊ.ಗೋವಿಂದರಾವ್ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ ವಲಯ ಸೇರಿ ಒಟ್ಟು 45 ಮಾನದಂಡಗಳ ಆಧಾರದ ಮೇಲೆ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಳ್ಳಲಾಗಿದೆ. ಈ ಅಧ್ಯಯನದ ವರದಿಯನ್ನು ಮೂರು ತಿಂಗಳಲ್ಲಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಬೀದರ್ ಜಿಲ್ಲೆ ಸೇರಿ ಈಗಾಗಲೇ 28 ಜಿಲ್ಲೆಗಳಲ್ಲಿ ಅಧ್ಯಯನ ಪೂರ್ಣಗೊಂಡಿದೆ. ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ಧಿ ಹಾಗೂ ಬದಲಾವಣೆಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗೆ ಅಗತ್ಯವಿರುವ ಅಂಶಗಳ ವರದಿಯನ್ನು ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 153 ಹಿಂದುಳಿದ ತಾಲ್ಲೂಕುಗಳಿವೆ. ನೀರಾವರಿ, ಮೂಲಸೌಕರ್ಯ, ಕೈಗಾರಿಕೆ, ತಲಾದಾಯ, ಉದ್ಯೋಗ, ಕೃಷಿ ಮುಂತಾದ ಪ್ರಮುಖ ವಲಯಗಳನ್ನು ಗುರುತಿಸಿ ವಾಸ್ತವಾಂಶ ಆಧರಿಸಿ ವರದಿ ಸಿದ್ಧಪಡಿಸಲಾಗುದು. ಉದ್ಯೋಗಾವಕಾಶಗಳ ಸೃಷ್ಠಿ, ಉತ್ತಮ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಮಹಿಳಾ ಆಧಾರಿತ ಘಟಕಗಳು, ತಂತ್ರಜ್ಞಾನ, ಕೈಗಾರಿಕೆಗಳ ಸ್ಥಾಪನೆಯಂತಹ ಸಲಹೆಗಳು ಇಂದು ಜನಪ್ರತಿನಿಧಿ ಹಾಗೂ ತಜ್ಞರಿಂದ ಬಂದಿದ್ದು, ಅವುಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ರಾಜ್ಯದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ 2007 ರಿಂದ 2023 ರವರೆಗೆ 43,456 ಕೋಟಿ ರೂ. ಶಿಫಾರಸ್ಸು ಮಾಡಲಾಗಿತ್ತು. ಅದರಲ್ಲಿ 35,380 ಕೋಟಿ ರೂ. ಬಿಡುಗಡೆಯಾಗಿ 32,610 ಕೋಟಿ ರೂ. ಖರ್ಚಾಗಿದೆ ಎಂದರು.

ರಾಜ್ಯದ ನಾಲ್ಕು ವಿಭಾಗಗಳ ಪೈಕಿ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಹಿಂದುಳಿದ ಪ್ರದೇಶಗಳಿವೆ. ಇನ್ನು ತಾಲ್ಲೂಕು ಮಟ್ಟದಲ್ಲಿ ಹೋಗಿ ಅಧ್ಯಯನ ಮಾಡಲಾಗುವುದು. ರಾಜ್ಯದ ಕಿರೀಟ ಪ್ರಾಯವಾಗಿರುವ ಬೀದರ್ ಜಿಲ್ಲೆಯಲ್ಲಿ 4 ಅತ್ಯಂತ ಹಿಂದುಳಿದ ತಾಲ್ಲೂಕುಗಳಿವೆ. 2014-15ರ ಜಿಲ್ಲಾ ಮಾನವ ಅಭಿವೃದ್ಧಿ ವರದಿಯಂತೆ ಬೀದರ್ ಜಿಲ್ಲೆಯು ರಾಜ್ಯದಲ್ಲಿ 22ನೇ ಸ್ಥಾನದಲ್ಲಿತ್ತು. 2025ನೇ ಅಂಕಿ ಅಂಶಗಳ ಪ್ರಕಾರ ಬೀದರ್ ಜಿಲ್ಲೆಯ 2022ನೇ ಸಾಲಿನ ಜಿಡಿಡಿಪಿ 28,44,018 ಲಕ್ಷ ರೂ. ಗಳಾಗಿವೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿನ ಹಲವು ಸಮಸ್ಯೆಗಳಾದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅಭಿವೃದ್ಧಿ, ಸಂಪರ್ಕ ಸುಧಾರಣೆ, ಕೌಶಲ್ಯ ಅಭಿವೃದ್ಧಿ, ಶಿಕ್ಷಕರ ಭರ್ತಿ ಹಾಗೂ ತರಬೇತಿ, ಉನ್ನತ ಹಾಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿ, ವಲಸೆ, ಕೃಷಿ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಮುಂತಾದ ಸಲಹೆಗಲನ್ನು ಸಮಿತಿಯು ಆಲಿಸಿದ್ದು, ಎಲ್ಲವನ್ನು ವರದಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ರಾಜ್ಯ ಸರ್ಕಾರ 2024 ರಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲ ಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗದಿಪಡಿಸಲಿದೆ ಎಂದು ತಿಳಿಸಿದರು.

ತಲಾ ಆದಾಯ ಒಂದೇ ಸೂಚ್ಯಂಕ ಆಗಬಾರದು. ವಾಸ್ತವಾಂಶದ ಆಧಾರದ ಮೇಲೆ ಅಧ್ಯಾಯನದ ವರದಿ ನಡೆಸಬೇಕು. ಹೋಬಳಿವಾರು, ತಾಲ್ಲೂಕುವಾರು ನೀರಾವರಿ, ಕೃಷಿ, ಉದ್ಯೋಗ ಸಮಸ್ಯೆ, ಶಿಕ್ಷಣ ಸಮಸ್ಯೆ ಅಪೌಷ್ಟಿಕತೆ ಸಮಸ್ಯೆ, ವಲಸೆ ಸಮಸ್ಯೆ ಸಹ ಅಧ್ಯಾಯನ ಮಾಡುವಂತೆ ಸಮಿತಿಗೆ ಸಲಹೆ ನೀಡಿದರು.

ಪ್ರಾಥಮಿಕ, ಪ್ರೌಢ, ಪದವಿ ಶಿಕ್ಷಣ ಸುಧಾರಣೆ ಮಾಡುವ ಜೊತೆಗೆ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ನೀಡಿದ್ದೆವೆ. ಹಾಗೆಯೇ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಭರ್ತಿ ಮಾಡಿಕೊಳ್ಳಲಾಗುವುದು. ಇನ್ನುಳಿದಂತೆ ಶಿಕ್ಷಕರಿಗೆ ತರಬೇತಿ ನೀಡುವ ಮುಖ್ಯವಾದ ಕೆಲಸವಾಗಬೇಕು ಎಂದರು.

ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಡಾ.ಎಂ.ಜಿ.ಮೂಳೆ, ನಗರಸಭೆ ಅಧ್ಯಕ್ಷ ಎಂ.ಡಿ.ಗೌಸ್, ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ.ಶೆಟಕಾರ್, ವಕೀಲರ ಸಂಘದ ಅಧ್ಯಕ್ಷ ಅಶೋಕ್ ಮನೂರೆ, ಶಿಕ್ಷಣ ತಜ್ಞ ಪ್ರೊ.ಜಗನ್ನಾಥ್ ಹೆಬ್ಬಾಳೆ, ಎಸ್.ಎಂ.ಜನವಾಡಕರ್, ಉದ್ಯಮಿ ಬಸವರಾಜ್ ಧನ್ನೂರ್ ಹಾಗೂ ಇತರರು ತಮ್ಮ ಸಲಹೆಗಳನ್ನು ಸಮಿತಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಡಾ.ಆರ್.ವಿಶಾಲ್, ಸದಸ್ಯೆ ಪ್ರೊ.ಸಂಗೀತಾ ಕಟ್ಟಿಮನಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X