Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬ್ರಿಮ್ಸ್ ಆಸ್ಪತ್ರೆಯಲ್ಲಿ...

Bidar | ಬ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟದ ಔಷಧಿ ನೀಡಲು ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 Sept 2026 7:54 PM IST
share
Bidar | ಬ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟದ ಔಷಧಿ ನೀಡಲು ಆಗ್ರಹಿಸಿ ಮನವಿ

ಬೀದರ್ : ಬ್ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಗುಣಮಟ್ಟದ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂಬ ಆರೋಪಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಸೋಮವಾರ ಮನವಿ ಸಲ್ಲಿಸಿದೆ.

ಬ್ರಿಮ್ಸ್ ಮುಖ್ಯ ಆಡಳಿತಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಬೀದರ್ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ವಿವಿಧ ತಾಲೂಕುಗಳಿಂದ ಪ್ರತಿದಿನ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಆದರೆ ಅವರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಆರೋಪಿಸಲಾಗಿದೆ.

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದ್ದರೂ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಔಷಧಿಗಳನ್ನು ಖರೀದಿಸಲಾಗುತ್ತಿದೆ ಎಂಬ ಆರೋಪಗಳಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಕಂಡುಬರುತ್ತಿದ್ದು, ರೋಗಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ಕರವೇ ಆರೋಪಿಸಿದೆ.

ಸರ್ಕಾರದ ಅನುಮತಿ ಪಡೆಯದೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು. ಬ್ರಿಮ್ಸ್ ಆಡಳಿತದ ಕಾರ್ಯವೈಖರಿಯನ್ನು ಪರಿಶೀಲಿಸಿ ಆರೋಪಗಳು ಸಾಬೀತಾದರೆ ಸಂಬಂಧಿಸಿದ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬ್ರಿಮ್ಸ್ ಆಸ್ಪತ್ರೆ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪಾ, ಜಿಲ್ಲಾ ಕಾರ್ಯಾಧ್ಯಕ್ಷ ಜಗನ್ನಾಥ್ ಕೌಠಾ, ಜಿಲ್ಲಾ ಸಂಚಾಲಕ ಬಸವರಾಜ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಚಂದ್ರಕಾಂತ್‌ ಪೋಳ, ಬೀದರ್ ದಕ್ಷಿಣ ತಾಲೂಕು ಅಧ್ಯಕ್ಷ ನಿಲೇಶ್ ಠಾಠೋಡ್, ಜಿಲ್ಲಾ ಸಹ ಕಾರ್ಯದರ್ಶಿ ಮೊಜೆಸ್ ಅಣದೂರಕರ್, ಮೈಕಲ್ ಕಡ್ಯಾಳ, ಅಶೋಕ್ ಕಡ್ಯಾಳ, ದಿನೇಶ್ ಕಮಠಾಣ, ರಾಜು ಮೇಲದೊಡ್ಡಿ, ಜಾನ್ ಕಮಠಾಣ, ಪಿಂಟು ಸಿರ್ಸಿ, ಪ್ರಸಾದ್ ಘೋಡಂಪಳಿಕರ್, ಗಿರೀಶ್ ಓಂಕಾರ್, ಅಬ್ದುಲ್ ರಹೀಮ್, ಧನರಾಜ ಚಿಟ್ಟಾವಾಡಿ ಸೇರಿದಂತೆ ಇತರರು ಇದ್ದರು.

Tags

Brims HospitalBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X