Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ...

Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ9 Sept 2026 7:16 PM IST
share
Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯಿಂದ ಮನವಿ

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದೆ.

ಮನವಿಯಲ್ಲಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಎಲ್ಲಾ ಖಾಲಿ ಹುದ್ದೆಗಳಿಗೂ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತ್ಯೇಕ 371(ಜೆ) ಅನುಷ್ಠಾನ ಪ್ರಾಧಿಕಾರವನ್ನು ರಚಿಸಬೇಕು ಎಂದು ಸಮಿತಿ ಒತ್ತಾಯಿಸಿದೆ. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದ ಸಮರ್ಪಕ ಬಳಕೆಗೆ ಮುಂದಿನ ಹತ್ತು ವರ್ಷಗಳ ಕಾರ್ಯನೀತಿಯನ್ನು ರೂಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೃಷ್ಣಾ ಕೊಳ್ಳದಲ್ಲಿ ಕರ್ನಾಟಕಕ್ಕೆ ಲಭ್ಯವಿರುವ 700 ಟಿಎಂಸಿ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಸರ್ಕಾರದ ಗಮನ ಸೆಳೆಯಲಾಗಿದೆ.

ಕಲ್ಯಾಣ ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಜೊತೆಗೆ ಸುಸಜ್ಜಿತ ಕಟ್ಟಡಗಳು, ಪ್ರಯೋಗಶಾಲೆಗಳು, ಗ್ರಂಥಾಲಯಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ನಿರ್ಮಿಸಿ ಉನ್ನತ ಶಿಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರದೇಶದ ನಿರುದ್ಯೋಗಿ ವಿದ್ಯಾವಂತ ಯುವಕರಿಗಾಗಿ ವಿಶೇಷ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಹೈನುಗಾರಿಕೆಗೆ ಉತ್ತೇಜನ ನೀಡಲು ವಿಶೇಷ ಯೋಜನೆ ಜಾರಿಗೊಳಿಸುವುದರ ಜೊತೆಗೆ, ಬಳ್ಳಾರಿ ಜೀನ್ಸ್ ಉದ್ಯಮವನ್ನು ಮತ್ತಷ್ಟು ಬಲಪಡಿಸಿ ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಂಚಾಲಕಿ ರೇಷ್ಮಾ ಹಂಸರಾಜ್‌, ಪಂಡಿತರಾವ್‌ ಚಿದ್ರಿ, ವಿನಯ್‌ ಮಾಳಗೆ, ನಿಝಾಮುದ್ದಿನ್‌, ಸಾವಿತ್ರಿ, ಪ್ರಭು ಸಂತೋಷಕರ್‌, ಪಾಂಡುರಂಗ್‌, ಖಾಜಾಮಿಯಾ ಹಾಗೂ ಮಹೇಶ್‌ ಗೋರನಾಳಕರ್‌ ಸೇರಿದಂತೆ ಇತರರು ಇದ್ದರು.

Tags

Kalyana KarnatakaBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X