Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಪೂರ್ವಜರ ಜ್ಞಾನ ಮುಂದಿನ...

Bidar | ಪೂರ್ವಜರ ಜ್ಞಾನ ಮುಂದಿನ ಪೀಳಿಗೆಗೆ ಪರಿಚಯಿಸುವ ಮಾಧ್ಯಮಗಳೇ ಹಸ್ತಪ್ರತಿಗಳು : ಡಾ.ಡಿ.ವಿ.ಪರಮಶಿವಮೂರ್ತಿ

23ನೇ ಅಖಿಲ ಕರ್ನಾಟಕ ಹಸ್ತಪ್ರತಿ ಸಮ್ಮೇಳನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Oct 2026 10:40 PM IST
share
Bidar | ಪೂರ್ವಜರ ಜ್ಞಾನ ಮುಂದಿನ ಪೀಳಿಗೆಗೆ ಪರಿಚಯಿಸುವ ಮಾಧ್ಯಮಗಳೇ ಹಸ್ತಪ್ರತಿಗಳು : ಡಾ.ಡಿ.ವಿ.ಪರಮಶಿವಮೂರ್ತಿ

ಬೀದರ್: ನಮ್ಮ ನಾಡಿನ ಪೂರ್ವಜರ ಜ್ಞಾನ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಮುಖ ಮಾಧ್ಯಮಗಳೇ ಹಸ್ತಪ್ರತಿಗಳು. ದೇಶದಲ್ಲಿಯೇ ಹಸ್ತಪ್ರತಿಗಳ ಅಧ್ಯಯನ ಮತ್ತು ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಿ ಸಮ್ಮೇಳನಗಳನ್ನು ಆಯೋಜಿಸುತ್ತಿರುವ ಏಕೈಕ ವಿಶ್ವವಿದ್ಯಾಲಯ ಹಂಪಿ ಕನ್ನಡ ವಿಶ್ವವಿದ್ಯಾಲಯವಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ, ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕ.ರಾ.ಶಿ. ಸಂಸ್ಥೆಯ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಆಯೋಜಿಸಿದ್ದ 23ನೇ ಅಖಿಲ ಕರ್ನಾಟಕ ಹಸ್ತಪ್ರತಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಲಿಪಿಯು ಕಾಲದಿಂದ ಕಾಲಕ್ಕೆ ಬದಲಾವಣೆಗಳನ್ನು ಕಂಡಿದ್ದು, ಸುಮಾರು ಒಂದು ಸಾವಿರ ವರ್ಷಗಳ ಲಿಪಿ ವಿಕಾಸದ ಇತಿಹಾಸ ಹೊಂದಿದೆ. ಹೀಗಾಗಿ ಪ್ರಾಚೀನ ಹಸ್ತಪ್ರತಿಗಳಲ್ಲಿರುವ ಲಿಪಿಯನ್ನು ಓದುವುದು ಇಂದಿನ ಕಾಲದಲ್ಲಿ ಸವಾಲಿನ ಕೆಲಸವಾಗಿದೆ. ಆದರೆ, ಈ ಕಾರಣಕ್ಕೆ ಹಸ್ತಪ್ರತಿಗಳನ್ನು ನಿರ್ಲಕ್ಷಿಸಬಾರದು. ಅವುಗಳಲ್ಲಿ ನಮ್ಮ ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳು ಅಡಕವಾಗಿವೆ ಎಂದು ಹೇಳಿದರು.

ಹಸ್ತಪ್ರತಿಗಳು ಹಿಂದಿನ ಕಾಲದ ಜ್ಞಾನವನ್ನು ಇಂದಿನ ಪೀಳಿಗೆಯೊಂದಿಗೆ ಸಂವಹನಗೊಳಿಸುವ ಮಹತ್ವದ ಮಾಧ್ಯಮಗಳಾಗಿವೆ. ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ, ಸಂಪಾದನೆ, ಅಧ್ಯಯನ, ಅಧ್ಯಾಪನ, ವ್ಯಾಖ್ಯಾನ ಹಾಗೂ ವಿಶ್ಲೇಷಣೆಯ ಮೂಲಕ ಹಸ್ತಪ್ರತಿಶಾಸ್ತ್ರ ವಿಭಾಗವು ಕಳೆದ ಮೂರು ದಶಕಗಳಿಂದ ಮಹತ್ವದ ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಹಿರಿಯ ಹಸ್ತಪ್ರತಿ ಪಂಡಿತ ಡಾ. ನಾ. ಗೀತಾಚಾರ್ಯ ಮಾತನಾಡಿ, ಸರ್ಕಾರದಲ್ಲಿ ಶಾಸನಗಳು, ಪುರಾತತ್ವ, ದಾಖಲೆಗಳು, ಪುಸ್ತಕಗಳು ಹಾಗೂ ಪ್ರಾಚೀನ ವಸ್ತುಗಳ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆಗಳಿದ್ದರೂ, ಹಸ್ತಪ್ರತಿಗಳಿಗಾಗಿ ಪ್ರತ್ಯೇಕ ಇಲಾಖೆ ಇಲ್ಲದಿರುವುದು ವಿಷಾದನೀಯ. ಅಮೂಲ್ಯ ಹಸ್ತಪ್ರತಿಗಳು ಸೂಕ್ತ ಸಂರಕ್ಷಣೆಯ ಕೊರತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ನಾಶವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಈ ಹಿಂದೆ ರಾಷ್ಟ್ರೀಯ ಹಸ್ತಪ್ರತಿ ಮಿಷನ್ ಮೂಲಕ ಹಸ್ತಪ್ರತಿಗಳ ಸಂಗ್ರಹ ಮತ್ತು ಸಂರಕ್ಷಣೆಗೆ ನೆರವು ನೀಡುತ್ತಿತ್ತು. ಇದೀಗ ಜ್ಞಾನ ಭಾರತಂ ಮಿಷನ್ ಮೂಲಕ ದೇಶಾದ್ಯಂತ ಹಸ್ತಪ್ರತಿಗಳ ಸಮೀಕ್ಷೆ ನಡೆಸಿ, ಲಭ್ಯವಿರುವ ಹಸ್ತಪ್ರತಿಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಕಾರ್ಯದಲ್ಲಿ ಹಸ್ತಪ್ರತಿಶಾಸ್ತ್ರ ಕ್ಷೇತ್ರವೂ ಕೈಜೋಡಿಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಹಸ್ತಪ್ರತಿಗಳ ಸಂಗ್ರಹ ಮತ್ತು ಸಂರಕ್ಷಣೆಗೆ ಪ್ರತ್ಯೇಕ ಹಸ್ತಪ್ರತಿ ಸಂಗ್ರಹಾಲಯ ಸಂಸ್ಥೆಯನ್ನು ಸ್ಥಾಪಿಸಬೇಕು. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಹಸ್ತಪ್ರತಿ ಸಂಗ್ರಹಾಲಯಗಳನ್ನು ಆರಂಭಿಸುವ ಮೂಲಕ ಈ ಅಮೂಲ್ಯ ಜ್ಞಾನಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿದರು.

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಎಸ್. ಬಿರಾದಾರ್ ಅವರು ‘ಹಸ್ತಪ್ರತಿ ವ್ಯಾಸಂಗ 26’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ, ಎಲೆಮರೆಯ ಕಾಯಿಯಂತೆ ಉಳಿದಿರುವ ವಿದ್ವಾಂಸರನ್ನು ಗುರುತಿಸಿ, ಅವರ ವಿದ್ವತ್ತು ಹಾಗೂ ಜ್ಞಾನ ಪರಂಪರೆಯ ಕುರಿತು ಚರ್ಚಿಸುವುದು ಮತ್ತು ಅವರ ಉಪನ್ಯಾಸಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಸಾನ್ನಿಧ್ಯ ವಹಿಸಿದ್ದರು. ಕ.ರಾ.ಶಿ. ಸಂಸ್ಥೆಯ ಅಧ್ಯಕ್ಷ ಬಸವರಾಜ್ ಜಾಬಶಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೀರೇಶ ಬಡಿಗೇರ್, ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್, ಬಸವರಾಜ್ ಜಿ. ಪಾಟೀಲ್ ಅಷ್ಟೂರ್, ಸತೀಶ್ ಪಾಟೀಲ್ ಹಾಗೂ ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚೆನ್ನಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಮಹಾನಂದಾ ಮಡಕಿ ಸ್ವಾಗತಿಸಿದರು. ಡಾ. ಶಿವಶಂಕರ್ ಟೋಕರೆ ನಿರೂಪಿಸಿದರು. ಶಾಂತಕುಮಾರ್ ಪಾಟೀಲ್ ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X