Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಜ.30 ರಿಂದ 24ನೇ ವಚನ...

ಬೀದರ್ | ಜ.30 ರಿಂದ 24ನೇ ವಚನ ವಿಜಯೋತ್ಸವ : ಡಾ.ಗಂಗಾಂಬಿಕೆ ಅಕ್ಕ

ವಾರ್ತಾಭಾರತಿವಾರ್ತಾಭಾರತಿ27 Jan 2026 7:21 PM IST
share
ಬೀದರ್ | ಜ.30 ರಿಂದ 24ನೇ ವಚನ ವಿಜಯೋತ್ಸವ : ಡಾ.ಗಂಗಾಂಬಿಕೆ ಅಕ್ಕ

ಬೀದರ್ : ಜ.30 ರಿಂದ ಫೆ.1ರ ವರೆಗೆ ನಗರದ ಬಸವಗಿರಿಯಲ್ಲಿ 24ನೇ ವಚನ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಗಂಗಾಂಬಿಕೆ ಅಕ್ಕ ಅವರು ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 24ನೇ ವಚನ ವಿಜಯೋತ್ಸವವನ್ನು ಜ.30, 31 ಮತ್ತು ಫೆ.1 ರಂದು ಮೂರು ದಿನಗಳ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದರು.

ಬಸವಾದಿ ಶರಣ ವಚನಗಳು, ಮಾನವ ಬದುಕಿನ ದಾರಿಯಲ್ಲಿ ಹಚ್ಚಿಟ್ಟ ದೀಪಗಳು. ಸಮಾನತೆ, ಸಹಕಾರ, ಸಹಬಾಳ್ವೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯತೆಯ ಧರ್ಮದ ನುಡಿ ರಚನೆಗಳು. 12ನೇ ಶತಮಾನದ ಶರಣರ ಸ್ವಾನುಭಾವದಿಂದ ಮೂಡಿ ಬಂದಿರುವ ಈ ಶ್ರೇಷ್ಠ ನುಡಿಗಳು ಇಂದು ನಮಗೆ ಉಳಿದು ಬಂದಿದ್ದೇ ರೋಚಕ ಸಂಗತಿ. ಶರಣರ ಬಲಿದಾನ ಹಾಗೂ ವೀರಗಾಥೆಯ ಕಾರ್ಯಗಳಿಂದ ಉಳಿದು ಬಂದಿರುವ 'ವಚನ ಸಾಹಿತ್ಯ ಸಂರಕ್ಷಣೆ' ಸ್ಮರಣೆಗಾಗಿ ಪ್ರತಿ ವರ್ಷ ವಚನ ವಿಜಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ನುಡಿದರು.

ಜ.30 ರಂದು ಮುಂಜಾನೆ 8 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜಾಯೋಗ, ಮುಂಜಾನೆ 11.00 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ, ಮಧ್ಯಾಹ್ನ 3 ಗಂಟೆಗೆ ಸ್ತ್ರೀ ಶಕ್ತಿ ಸಮಾವೇಶ, ಸಾಯಂಕಾಲ 6 ಗಂಟೆಗೆ ಶರಣ ಕಲಾವೈಭ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಜ.31 ರಂದು ಬೆಳಗ್ಗೆ 8 ಗಂಟೆಗೆ ಸಾಮೂಹಿಕ ವಚನ ಪಾರಾಯಣ, ಬೆಳಿಗ್ಗೆ 11 ಗಂಟೆಗೆ ಯುವ ಶಕ್ತಿ ಸಮಾವೇಶ- ವಿಶ್ವಕಲ್ಯಾಣ ಯುವ ಪರಿಷತ್‌ ನವ ಸಮಾರಂಭ, ಮಧ್ಯಾಹ್ನ 3 ಗಂಟೆಗೆ ಧರ್ಮ ಚಿಂತನಗೋಷ್ಠಿ, ಸಾಯಂಕಾಲ 6 ಗಂಟೆಗೆ ಶರಣ ಕಲಾ ವೈಭವ-ವಚನ ನೃತ್ಯೋತ್ಸವ ಕಾರ್ಯಕ್ರಮ ಜರುಗಲಿವೆ. ಫೆ.1 ರಂದು ಬೆಳಗ್ಗೆ 9 ಗಂಟೆಗೆ ಮೆರವಣಿಗೆ, ಮಧ್ಯಾಹ್ನ 2:30 ಗಂಟೆಗೆ ವಚನ ಸಾಹಿತ್ಯಕ್ಕೆ ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಚಿಂತನಕಾರ ಸಿದ್ದಣ್ಣ ಲಂಗೋಟಿ, ಹಿರಿಯರಾದ ಬಸವರಾಜ್ ಬುಳ್ಳಾ, ಸೋಮಶೇಖರ್ ಪಾಟೀಲ್ ಗಾದಗಿ, ರಾಜೇಂದ್ರಕುಮಾರ್ ಗಂದಗೆ, ಶರಣಪ್ಪ ಮಿಠಾರೆ, ಚಂದ್ರಕಾಂತ್ ಮಿರ್ಚೆ, ಸುರೇಶ್ ಚನಶೆಟ್ಟಿ, ಬಾಬು ವಾಲಿ, ರಾಜಕುಮಾರ್ ಟಿಳ್ಳೆಕರ್, ಆದಿಶ್ ವಾಲಿ, ವಿಶ್ವನಾಥ್ ಕಾಜಿ, ಜಯರಾಜ್ ಖಂಡ್ರೆ, ವಿಜಯಲಕ್ಷ್ಮೀ ಸುಲೇಪೇಟ್ ಹಾಗೂ ಶಿವಶಂಕರ್ ಟೋಕರೆ ಸೇರಿದಂತೆ ಇತರರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X