Bidar | ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬು ಬೆಂಕಿಗಾಹುತಿ; ಲಕ್ಷಾಂತರ ರೂ. ಹಾನಿ

ಬೀದರ್: ಸುಮಾರು 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ಬೀದರ್ ತಾಲೂಕಿನ ಆಣದೂರ್ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ವಿಠಲ್ ರೆಡ್ಡಿ ಹಾಗೂ ರಾಜರೆಡ್ಡಿ ಅವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟುಹೋಗಿದೆ. ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವಿಠಲ್ ರೆಡ್ಡಿ ಆರೋಪಿಸಿದ್ದಾರೆ.
ಕಬ್ಬಿನ ಬೆಳೆ ನಾಶದಿಂದ ಸುಮಾರು 8ರಿಂದ 10 ಲಕ್ಷ ರೂ. ವರೆಗೆ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹೊಲಗಳ ಮೇಲೆ ವಿದ್ಯುತ್ ತಂತಿಗಳು ಜೋತುಬಿದ್ದಿದ್ದರೂ ಜೆಸ್ಕಾಂ ಅಧಿಕಾರಿಗಳು ಅವುಗಳ ಬಗ್ಗೆ ಗಮನಹರಿಸಿ ಅಗತ್ಯ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ವಿಠಲ್ ರೆಡ್ಡಿ ದೂರಿದ್ದಾರೆ.
Next Story




