ಬೀದರ್ | ಪಲ್ಟಿಯಾದ ಕಾರಿನಲ್ಲಿ 67 ಕೆ.ಜಿ ಗಾಂಜಾ ಪತ್ತೆ

ಬೀದರ್ : ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಬಳಿ ಪಲ್ಟಿಯಾದ ಕಾರಿನಲ್ಲಿ 67 ಕೆಜಿ ಗಾಂಜಾ ಪತ್ತೆಯಾದ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬೀದರ್ ಮೂಲದ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿದ್ದು, ಕಾರು ಪಲ್ಟಿಯಾದ ಬಳಿಕ ಪೊಲೀಸರು ಪರಿಶೀಲನೆ ನಡೆಸಿದಾಗ, ಸುಮಾರು 67 ಲಕ್ಷ ರೂ. ಮೌಲ್ಯದ 67 ಕೆ.ಜಿ ಗಾಂಜಾ ಕಾರಿನೊಳಗೇ ಪತ್ತೆಯಾಗಿದೆ. ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
Next Story





