Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಶ್ರಮ, ಶ್ರದ್ಧೆಯಿಂದ ಅಧ್ಯಯನ...

Bidar | ಶ್ರಮ, ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಉಜ್ವಲ ಭವಿಷ್ಯ ಸಾಧ್ಯ: ಬಸವರಾಜ್ ತೊಂಡಾರೆ

ವಾರ್ತಾಭಾರತಿವಾರ್ತಾಭಾರತಿ22 Aug 2026 7:20 PM IST
share
Bidar | ಶ್ರಮ, ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಉಜ್ವಲ ಭವಿಷ್ಯ ಸಾಧ್ಯ: ಬಸವರಾಜ್ ತೊಂಡಾರೆ

ಬೀದರ್: ಶಿಕ್ಷಣವು ಜ್ಞಾನ ಪರಂಪರೆಯ ದಾರಿಯಾಗಿದ್ದು, ಕೌಶಲ್ಯ ಮತ್ತು ವಿವೇಕವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಶ್ರಮ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಬಿಡಿಪಿಸಿ ನಿರ್ದೇಶಕ ಬಸವರಾಜ್ ತೊಂಡಾರೆ ಹೇಳಿದರು.

ಬಸವಕಲ್ಯಾಣ ನಗರದ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ 2026–27ನೇ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರ ಪಡೆಯುವುದಕ್ಕೆ ಸೀಮಿತವಾಗದೆ ಜ್ಞಾನ, ಸೃಜನಶೀಲತೆ ಮತ್ತು ಕೌಶಲ್ಯಗಳ ಮೂಲಕ ಸಮಾಜ ಹಾಗೂ ಜಗತ್ತನ್ನು ರೂಪಿಸುವತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತದೆ. ಆದರೆ ಅವುಗಳನ್ನು ಶೈಕ್ಷಣಿಕ ಬೆಳವಣಿಗೆಗೆ ಬಳಸಿಕೊಂಡು ಸರ್ವತೋಮುಖ ಅಭಿವೃದ್ಧಿ ಸಾಧಿಸುವ ಜವಾಬ್ದಾರಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿಗಳ ಸಾಧನೆಯೇ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಮಾನದಂಡವಾಗುತ್ತದೆ ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಭೀಮಾಶಂಕರ್ ಬಿರಾದಾರ್ ಮಾತನಾಡಿ, ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಬಹುಶಿಸ್ತೀಯ ಹಾಗೂ ಅಂತರ್ಶಿಸ್ತೀಯ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿವಿಧ ವಿಷಯಗಳ ಸಂಶೋಧನಾ ಪ್ರಬಂಧಗಳು ಮತ್ತು ಲೇಖನಗಳ ಅಧ್ಯಯನದ ಮೂಲಕ ಜ್ಞಾನ ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೂ ವಿದ್ಯಾರ್ಥಿಗಳು ಮಹತ್ವ ನೀಡಬೇಕು. ಗುಣಮಟ್ಟದ ಅಧ್ಯಯನ, ಸಂಶೋಧನೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಪಿಸಿ ನಿರ್ದೇಶಕ ಭದ್ರಿನಾಥ್ ಪಾಟೀಲ್, ಬಿಡಿವಿಸಿ ಕೋಶಾಧ್ಯಕ್ಷ ಶಿವರಾಜ್ ಶಾಶೆಟ್ಟೆ, ಬಸವೇಶ್ವರ್ ಪಿಜಿ ಪ್ರಾಚಾರ್ಯೆ ಶಾಂತಲಾ ಪಾಟೀಲ್, ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯೆ ಮಾಯಾ ಮುರಾಳೆ, ಡಾ. ಬಸವರಾಜ್ ಖಂಡಾಳೆ, ವಿವೇಕಾನಂದ್ ಶಿಂದೆ, ಸುಜಾವುದ್ದೀನ್, ರೋಷನ್ ಬಿ, ಸಂಗೀತಾ ಮಹಾಗಾವೆ, ಪ್ರಿಯಾ ಚೌಹಾಣ್, ನಾಗವೇಣಿ ಬಿರಾದಾರ್, ಶೀತಲ್ ರೆಡ್ಡಿ, ಸಚಿನ್ ಬಿಡುವೆ, ಚನ್ನಬಸಪ್ಪ ಹೆಚ್ಎಸ್, ಪ್ರವೀಣ್ ಬಿರಾದರ್, ನಾಗರಾಜ್ ನಾಸೆ, ಪ್ರಶಾಂತ್ ಬುಡಗೆ, ಸುಮಾ ಕುಂಟನೂರ್, ಐಶ್ವರ್ಯ ಖರೋಣೆ, ವೀರೇಶ್ ಸ್ವಾಮಿ ಹಾಗೂ ಗಣೇಶ್ ಮೇತ್ರಿ ಸೇರಿದಂತೆ ಇತರರು ಇದ್ದರು. ಗಂಗಾಧರ ಸಾಲಿಮಠ್ ನಿರೂಪಿಸಿ, ಸ್ವಾಗತಿಸಿದರು. ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ್ ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X