Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಅಧ್ಯಯನದಿಂದ...

ಬೀದರ್ | ಅಧ್ಯಯನದಿಂದ ಪ್ರಜಾಪ್ರಭುತ್ವವಾದಿ ನಿಲುವು ಹುಟ್ಟಲು ಸಾಧ್ಯ: ಸಿದ್ದಪ್ಪ ಮೂಲಗೆ

ವಾರ್ತಾಭಾರತಿವಾರ್ತಾಭಾರತಿ15 Nov 2024 6:30 PM IST
share
Photo of program

ಬೀದರ್ : ಅಧ್ಯಯನದಿಂದ ಪ್ರಜಾಪ್ರಭುತ್ವವಾದಿ ನಿಲುವು ಹುಟ್ಟಲು ಸಾಧ್ಯ. ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಅಧ್ಯಯನ ಅಗತ್ಯ. ಜಗತ್ತಿನಲ್ಲಿ ಜ್ಞಾನ ದಾಸೋಹ ಎಲ್ಲಕ್ಕಿಂತ ದೊಡ್ಡದು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

ಜಿಲ್ಲಾ ಕೇಂದ್ರ ಗ್ರಂಥಾಲಯ ಬಸವಕಲ್ಯಾಣ ಶಾಖೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ರಂಥಪಾಲಕ ಹಾಗೂ ಮಕ್ಕಳ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜ್ಞಾನ ಉತ್ಪಾದಿಸುವ, ಜ್ಞಾನ ಪರಂಪರೆ ಬೆಳೆಸುವ ಕೆಲಸ ಗ್ರಂಥಾಲಯಗಳಿಂದ ನಿರಂತರ ಸಾಧ್ಯ ಎಂದರು.

ಅಂಬೇಡ್ಕರರು, ಗಾಂಧೀಜಿ ಅವರು ಗ್ರಂಥಾಲಯಗಳ ಸಹವಾಸದಿಂದ ವಿಶ್ವದ ಅತ್ಯಂತ ದೊಡ್ಡ ಜ್ಞಾನಿಗಳೆಂದು ಗುರುತಿಸಲ್ಪಡುತ್ತಾರೆ. ಮಕ್ಕಳು ಓದಿ ಜ್ಞಾನ ಪಡೆಯುವ ಮೂಲಕ ಗ್ರಂಥಾಲಯ ಬಳಸಿಕೊಳ್ಳಲಿ. ಪಾಠ ಮಾಡಬೇಕಾದ ಅನೇಕ ಶಿಕ್ಷಕರು ಈ ಕಾಲದಲ್ಲಿ ಗ್ರಂಥಾಲಯಗಳಿಗೆ ಬರದೇ ಇರುವುದು ನೋವಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಎಲ್ಲಾ ಗಣ್ಯರ ಜಯಂತಿಗಳು ನೆಪ ಮಾತ್ರಕ್ಕೆ ಆಗದೇ ಅವರ ತತ್ವ ಸಿದ್ಧಾಂತಗಳನ್ನು ಹೊಸ ಪೀಳಿಗೆಗೆ ತಿಳಿಸುವ ಹಾಗೂ ಎಲ್ಲರೂ ಅಳವಡಿಸಿಕೊಳ್ಳುವ ಅಗತ್ಯವಿದೆ. ಅಮೇರಿಕಾದ ಶಿಕ್ಷಣ ಪದ್ಧತಿ ಪ್ರತಿ ವರ್ಷ ಶಿಕ್ಷಕರು ಮಾಡಿದ ಹೊಸ ಸಂಶೋಧನೆ, ಅಧ್ಯಯನ ಮಂಡಿಸಬೇಕು. ಇಲ್ಲದಿದ್ದರೆ ಅವರು ತಮ್ಮ ವೃತ್ತಿಯಲ್ಲಿ ಮುಂದುವರಿಯುವಂತಿಲ್ಲ. ನಮ್ಮಲ್ಲಿ ಅಂಥ ಮಾದರಿಗಳಿಲ್ಲ. ಸಿಬಿಎಸ್ಇ, ರಾಜ್ಯ ಪಠ್ಯಕ್ರಮ ಮೊದಲಾದವುಗಳು ಸೇರಿ ಶಿಕ್ಷಣದಲ್ಲಿ ಹಾಗೂ ಕಲಿಕೆಯಲ್ಲಿ ಎಷ್ಟೊಂದು ತಾರತಮ್ಯಗಳು ಕಾಣುತ್ತೇವೆ ಎಂದರು.

ಬಸವೇಶ್ವರ ಪದವಿ ಕಾಲೇಜು ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ಗ್ರಂಥಾಲಯಗಳಲ್ಲಿ ದೊರೆಯುವ ಮೂಲ ಕೃತಿಗಳು ಸಂಶೋಧನೆಗೆ ಆಕರವಾಗಿರುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಮಾಹಿತಿಗಿಂತ ಪುಸ್ತಕಗಳು ಹೆಚ್ಚು ಅಧಿಕೃತತೆ ಹೊಂದಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಜ್ಞಾನಕ್ಕೆ, ತಿಳುವಳಿಕೆಗೆ ನೆಮ್ಮದಿಯ ಬದುಕಿಗೆ ಓದು ಅಧ್ಯಯನ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಲೋಕೇಶ್ ಕನಕ, ಸಾಹಿತಿ ವೀರಣ್ಣ ಮಂಠಾಳಕರ್, ದೀಪಾಲಿ ಮಾನೆ, ನವನಾಥ ಬಿರಾದಾರ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X