ಬೀದರ್ | ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ; ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ಬೀದರ್ : ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿಯೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಇಲ್ಲಾಳ್ ಗ್ರಾಮದಲ್ಲಿ ನಡೆದಿದೆ.
ಅನಿಲ್ ಸೂರ್ಯವಂಶಿ (42) ಬೆಂಕಿ ಹಚ್ಚಿಕೊಂಡ ವ್ಯಕ್ತಿಯಾಗಿದ್ದು, ಮೂಲತಃ ಇತನು ಕಮಲನಗರ್ ನಿವಾಸಿಯಾಗಿದ್ದಾರೆ. ಇಲ್ಲಾಳ ಗ್ರಾಮದ ತನ್ನ ಪತ್ನಿ ಮನೆಗೆ ಬಂದ ಸಂದರ್ಭದಲ್ಲಿ ಈ ಕೃತ್ಯ ಎಸಗಿದ್ದಾನೆ. ಇದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಗಾಯಗೊಂಡ ವ್ಯಕ್ತಿಯನ್ನು ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.
Next Story





