Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಶರಣರ ವಚನಗಳನ್ನು ಜೀವನದಲ್ಲಿ...

Bidar | ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ಸಾಧ್ಯ: ಮಾಣಿಕ್ ನೇಳಗಿ

ವಾರ್ತಾಭಾರತಿವಾರ್ತಾಭಾರತಿ27 Oct 2026 10:41 PM IST
share
Bidar | ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ಸಾಧ್ಯ: ಮಾಣಿಕ್ ನೇಳಗಿ

ಬೀದರ್: ಶರಣರು ನೀಡಿದ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕಿನ ಮೌಲ್ಯ ಹೆಚ್ಚುವುದರ ಜೊತೆಗೆ ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಹಿರಿಯ ಸಾಹಿತಿ ಮಾಣಿಕ್ ನೇಳಗಿ ಹೇಳಿದರು.

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮದಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರ ಜ್ಯೋತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ತಂದೆ-ತಾಯಿಯರ ಆದ್ಯ ಕರ್ತವ್ಯವಾಗಿದೆ. ಸಂಸ್ಕಾರಯುತ ಮಕ್ಕಳೇ ನಾಡಿನ ಅಮೂಲ್ಯ ಸಂಪತ್ತು. ಅಂತಹ ಮಕ್ಕಳಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಪಾಲಕರು ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಶರಣರ ವಚನಗಳ ಮಹತ್ವವನ್ನು ತಿಳಿಸಿಕೊಡಬೇಕು ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಹುಡಗಿ ನಿಜಶರಣ ಅಂಬಿಗರ ಚೌಡಯ್ಯ ಮಠದ ಪೀಠಾಧಿಪತಿ ರಾಜಶೇಖರ್ ಗುರೂಜಿ ಮಾತನಾಡಿ, 12ನೇ ಶತಮಾನದಲ್ಲಿ ನಡೆದ ವೈಚಾರಿಕ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಪ್ರಮುಖರಾಗಿದ್ದಾರೆ. ಅವರ ವಚನಗಳಲ್ಲಿರುವ ಸಾಮಾಜಿಕ ಕಳಕಳಿ, ವೈಚಾರಿಕತೆ ಮತ್ತು ಜೀವನ ಮೌಲ್ಯಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ನುಡಿದರು.

ಈ ಉದ್ದೇಶದಿಂದ ಮಠವು ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ತೆರಳಿ ಜನರಲ್ಲಿ ವಚನಗಳ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಅವಿರತವಾಗಿ ನಡೆಸುತ್ತಿದೆ. ಜನರ ಬೆಂಬಲ ಮತ್ತು ಆಸಕ್ತಿ ಮಠಕ್ಕೆ ಇನ್ನಷ್ಟು ಶಕ್ತಿ ತುಂಬಿವೆ. ಪ್ರತಿಯೊಬ್ಬರೂ ನಿತ್ಯ ವಚನಗಳನ್ನು ಪಠಿಸುವುದರ ಜೊತೆಗೆ ತಮ್ಮ ಮಕ್ಕಳಿಗೂ ವಚನ ಪಠಣದ ಅಭ್ಯಾಸ ಮಾಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣರಾವ ಮರಕುಂದಾ ವಹಿಸಿದ್ದರು. ಈ ಸಂದರ್ಭದಲ್ಲಿ ಮುತ್ತಂಗಿಯ ಶಂಕರರಾವ್ ದಾಸ, ಟೋಕರೆ ಕೋಳಿ ಸಮಾಜದ ಅಧ್ಯಕ್ಷ ಸೂರ್ಯಕಾಂತ್ ಕಾಗಿ, ಮುಖಂಡರಾದ ಅಶೋಕ್ ಕಾಗಿ, ರಮೇಶ್ ಬಾಕಿ, ಸೂರ್ಯಕಾಂತ್ ಚಾಂಗ್ಲೇರಾ, ನಾಗರಾಜ್ ನಾಟಿಕಾರ್, ವಿಠಲ್ ಕಲೋಹಲ, ಮಲ್ಲಮ್ಮ ಬನ್ನಳ್ಳಿ, ಶಕುಂತಲಾ ಮರಕುಂದಾ, ವಿಠಲ್ ಎಂಕಟಿ ಹಾಗೂ ಪ್ರಭಾವತಿ ಕಾಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಿವೃತ್ತ ಅಧಿಕಾರಿ ತಿಪ್ಪಣ್ಣ ರಾಮಪೂರೆ ಕಾರ್ಯಕ್ರಮ ನಿರೂಪಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X