Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಯುವಕರು ಕ್ರೀಡೆಯಲ್ಲಿ ತೊಡಗಿದರೆ...

Bidar | ಯುವಕರು ಕ್ರೀಡೆಯಲ್ಲಿ ತೊಡಗಿದರೆ ಸಶಕ್ತ ಭಾರತ ನಿರ್ಮಾಣ ಸಾಧ್ಯ: ಡಾ.ಚಂದ್ರಕಾಂತ್ ಗಂಗಶಟ್ಟಿ

ವಾರ್ತಾಭಾರತಿವಾರ್ತಾಭಾರತಿ12 Sept 2026 9:49 PM IST
share
Bidar | ಯುವಕರು ಕ್ರೀಡೆಯಲ್ಲಿ ತೊಡಗಿದರೆ ಸಶಕ್ತ ಭಾರತ ನಿರ್ಮಾಣ ಸಾಧ್ಯ: ಡಾ.ಚಂದ್ರಕಾಂತ್ ಗಂಗಶಟ್ಟಿ

ಬೀದರ್: ಸಶಕ್ತ ಹಾಗೂ ಸದೃಢ ಭಾರತ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಚಂದ್ರಕಾಂತ್ ಗಂಗಶಟ್ಟಿ ಹೇಳಿದರು.

ಬಸವಕಲ್ಯಾಣದ ಐಡಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ “ಸದೃಢ ಶರೀರದಲ್ಲಿ ಸದೃಢ ಮನಸ್ಸು” ಎಂಬ ಸಂದೇಶವನ್ನು ಉಲ್ಲೇಖಿಸಿ, ಆರೋಗ್ಯ ಮತ್ತು ಚಾರಿತ್ರ್ಯ ಎರಡೂ ಜೀವನದಲ್ಲಿ ಅತ್ಯಂತ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಐಡಿಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಜಾಹಿದ್ ಪಾಶಾ ಖುರೇಶಿ ಮಾತನಾಡಿ, ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿರುವುದು ಸಂತಸದ ಸಂಗತಿ. ತಾಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಸವಕಲ್ಯಾಣ ಹಾಗೂ ದೇಶಕ್ಕೆ ಕೀರ್ತಿ ತರುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರ ಪರಿಶ್ರಮದಿಂದ ಸಾಧನೆಯತ್ತ ಸಾಗಬೇಕು ಎಂದು ಅವರು ಹೇಳಿದರು.

2026ರ ಫೀಫಾ ವಿಶ್ವಕಪ್‌ನಲ್ಲಿ ಲಮೀನ್ ಯಮಾಲ್ ಅವರಂತಹ ಯುವ ಪ್ರತಿಭೆಗಳು ವಿಶ್ವದ ಗಮನ ಸೆಳೆದಿರುವುದನ್ನು ಉದಾಹರಿಸಿ, ವಿದ್ಯಾರ್ಥಿಗಳೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ಉನ್ನತ ಮಟ್ಟದ ಕ್ರೀಡಾಪಟುಗಳಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಉಪನೀರ್ದೆಶಕ ಚಂದ್ರಕಾಂತ್ ಶಾಬಾದಕರ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಓಂಪ್ರಕಾಶ್ ಧಡ್ಡೆ, ಸಂಘದ ರಾಜ್ಯ ಪ್ರತಿನೀಧಿಗಳಾದ ಬಾಲಾಜಿ ವಾಡೇಕರ್, ಪ್ರಧಾನ ಕಾರ್ಯದರ್ಶಿ ಶಿವರಾಜ್ ಬೀರಾದಾರ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ್ ಕೋಸಂ, ಕಾರ್ಯಧ್ಯಕ್ಷ ಶ್ರೀಕಾಂತ್ ದಾಡಗೆ, ಜಿಲ್ಲಾ ಕ್ರೀಡಾ ಸಂಯೋಜಕ ಶರಣಪ್ಪ ನಾಟೀಕರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮುಜತಹಿದ್ ಉಮರ್, ಮುಕ್ತದಿರ್ ಉಮರ್ ಖುರೇಶಿ, ಪ್ರಾಚಾರ್ಯ ವಿ.ವೇಂಕಟರಾವ್, ಕ್ರೀಡಾ ನಿರ್ದೇಶಕ ರಹೀಮ್ ಕಾರಿಗಾರ್, ಕರೀಮ್, ಶಿವಕುಮಾರ್, ಸತೀಶ್ ಹಾಗೂ ಸತೀಶ್ ಧನಗಾವೆ ಸೇರಿದಂತೆ ತಾಲ್ಲೂಕಿನ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜಕುಮಾರ್ ರಾಠೊಡ್ ಸ್ವಾಗತಿಸಿದರು. ಉಪಪ್ರಾಚಾರ್ಯ ಶಾಂತಲಿಂಗ್ ಮಠಪತಿ ನಿರೂಪಿಸಿ, ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X