ಬೀದರ್ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೀದರ್ : ನೇಣು ಬಿಗಿದುಕೊಂಡು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಕುಮಾರ್ ತ್ರಿಮುಖೆ (29) ಎಂದು ಗುರುತಿಸಲಾಗಿದೆ.
ರವಿವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಿಂದ ಹೊರಗಡೆ ಹೋದವನು ಮರಳಿ ಬಂದಿರಲಿಲ್ಲ. ಇಂದು ಮುಂಜಾನೆ ಗ್ರಾಮದ ಹೊರವಲಯದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡದ್ದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಠಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





