ಬೀದರ್ | ಆದಿವಾಸಿಗಳು ಈ ದೇಶದ ಮೂಲ ವಂಶಸ್ಥರು : ಪಂಡಿತ್ ಚಿದ್ರಿ

ಬೀದರ್ : ಆದಿವಾಸಿಗಳು ಈ ದೇಶದ ಮೂಲ ವಂಶಸ್ಥರಾಗಿದ್ದಾರೆ ಎಂದು ಕರ್ನಾಟಕ ಗೊಂಡ ಆದಿವಾಸಿ ಸಂಘದ ಉಪಾಧ್ಯಕ್ಷ ಪಂಡಿತ್ ಚಿದ್ರಿ ಅವರು ತಿಳಿಸಿದರು.
ಇಂದು ನಗರದ ಮಹಾತ್ಮ ಬೊಮ್ಮಗೊಂಡೇಶ್ವರ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ಗೊಂಡ ಆದಿವಾಸಿ ಸಂಘ ಹಾಗೂ ಜಿಲ್ಲಾ ಟೋಕರಿ ಕೋಳಿ ಸಮಾಜ ಸಂಘದ ವತಿಯಿಂದ ಆಚರಿಸಿದ 31ನೇ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆದಿವಾಸಿಗಳು ದೇಶದ ಸ್ವತಂತ್ರ ಹೋರಾಟದಲ್ಲಿ ಮಹತ್ತರವಾದ ಕೊಡುಗೆ ನೀಡಿದ್ದಾರೆ. ಅರಣ್ಯ ಸಂಪತ್ತನ್ನು ಉಳಿಸಿ, ಆ ಸಂಪತ್ತು ಮುಂಬರುವ ಪೀಳಿಗೆಗೆ ನೀಡುವ ಕೆಲಸವನ್ನು ಆದಿವಾಸಿಗಳು ಮಾಡುತ್ತಿದ್ದಾರೆ ಎಂದರು.
ಕರ್ನಾಟಕ ಗೊಂಡ ಆದಿವಾಸಿ ಸಂಘದ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ, ಟೋಕರಿ ಕೋಳಿ ಸಮಾಜದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಣಿಕ್ ನೇಳಗಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ಅಧ್ಯಕ್ಷ ನಾರಾಯಣರಾವ್ ಭಂಗಿ, ಸಂಗೊಳ್ಳಿ ರಾಯಣ್ಣ ಗೊಂಡ ಸಂಘದ ಅಧ್ಯಕ್ಷ ಬಾಬುರಾವ್ ಮಲ್ಕಾಪುರ್, ಟೋಕರಿ ಕೋಳಿ ಸಮಾಜ ಸಂಘದ ಉಪಾಧ್ಯಕ್ಷ ಸುನಿಲ್ ಖಾಶೇಂಪೂರ್, ನಿಜ ಶರಣ ಅಂಬಿಗರ ಯುವ ಸೇನೆಯ ಜಿಲ್ಲಾಧ್ಯಕ್ಷ ಸುನಿಲ್ ಭಾವಿಕಟ್ಟಿ, ಗೊಂಡ ಹಾಗೂ ಟೋಕರಿ ಕೋಳಿ ಸಮುದಾಯದ ಮುಖಂಡರಾದ ಈಶ್ವರ್ ಮಲ್ಕಾಪೂರ್, ಬಾಬುರಾವ್ ಖಾಶೇಂಪೂರ್, ರವಿಕುಮಾರ್ ಸಿರ್ಸಿ, ಜಗನ್ನಾಥ್ ಜಂಬಗಿ, ಪುಂಡಲೀಕರಾವ್ ಇಟಗಂಪಳ್ಳಿ, ವಿಜಯಕುಮಾರ್ ಡುಮ್ಮೆ, ಮಾಣಿಕ್ ನೇಳಗಿ, ದೀಪಕ್ ಚಿದ್ರಿ, ಭೋಮ್ಮಗೊಂಡ ಚಿಟ್ಟಾವಾಡಿ, ರಘುನಾಥ್ ಭೂರೆ, ರವಿ ಇಂಜಿನಿಯರ್, ಹಣಮಂತರಾವ್ ಘೋಡಂಪಳ್ಳಿ ಹಾಗೂ ಚಂದ್ರಕಾಂತ್ ಫುಲೆಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.







