Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಗ್ರಾಮಸ್ಥರನ್ನು ಬೆಚ್ಚಿ...

ಬೀದರ್ | ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಏರ್ ಬಲೂನ್!

ಹೈದರಾಬಾದ್ ನಲ್ಲಿ ಹಾರಿಸಿದ ಬಲೂನ್ ಹುಮ್ನಾಬಾದ್ ನಲ್ಲಿ ಧರಾಶಾಯಿ!

ವಾರ್ತಾಭಾರತಿವಾರ್ತಾಭಾರತಿ18 Jan 2025 11:37 AM IST
share
ಬೀದರ್ | ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಏರ್ ಬಲೂನ್!

ಬೀದರ್: ಹವಾಮಾನ ಅಧ್ಯಯನಕ್ಕಾಗಿ ಹೈದರಾಬಾದ್ ನಿಂದ ಆಕಾಶಕ್ಕೆ ಹಾರಿಸಿದ್ದ ಏರ್ ಬಲೂನ್ (ಸ್ಯಾಟ್ ಲೈಟ್ ಪೇಲೋಡ್ ಬಲೂನ್)ವೊಂದು ಶನಿವಾರ ಬೆಳಗ್ಗೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಬಿದ್ದಿದೆ.

ತಾಂತ್ರಿಕ ಉಪಕರಣವನ್ನು ಒಳಗೊಂಡ ಈ ಏರ್ ಬಲೂನ್ ಅನ್ನು ಹೈದರಾಬಾದ್ನ TIFR(Tata Institute of Fundamental Research) ಬಲೂನ್ ಕೇಂದ್ರದಿಂದ ಜ.17ರಂದು ರಾತ್ರಿ 10 ಗಂಟೆ ಸುಮಾರಿಗೆ ಹಾರಿ ಬಿಡಲಾಗಿತ್ತು. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ಏರ್ ಬಲೂನ್ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಬಂದು ಬಿದ್ದಿದೆ. ಇದನ್ನು ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದರು.

ಈ ಬಲೂನ್ ಕೇಂದ್ರ ಸರಕಾರದ ಅಧ್ಯಯನದ ಅಡಿಯಲ್ಲಿ ಬರುವ ಸಂಶೋಧನಾ ಸ್ಯಾಟ್ ಲೈಟ್ ಪೇಲೋಡ್ ಆಗಿದೆ. ಇದರ ಕಾರ್ಯಾವಧಿ 6-7 ತಾಸು ಎಂದು ತಿಳಿದುಬಂದಿದೆ. "ಇದು ಹವಾಮಾನ ಅಧ್ಯಯನಕ್ಕಾಗಿ ಹಾರಿ ಬಿಡಲಾಗಿದ್ದು, ಎಲ್ಲಾದರೂ ಬಿದ್ದಿದ್ದು ಕಂಡುಬಂದಲ್ಲಿ ಹಾಳು ಮಾಡಬೇಡಿ. ಕೂಡಲೇ ಕರೆ ಮಾಡಿ ಮಾಹಿತಿ ನೀಡಿ" ಎಂದು ಸಂಪರ್ಕ ಸಂಖ್ಯೆಯನ್ನು ಒಳಗೊಂಡ ಮಾಹಿತಿ ಪತ್ರವನ್ನು ಇಂಗ್ಲಿಷ್, ಕನ್ನಡ, ಮರಾಠಿಯಲ್ಲಿ ಬರೆದು ಬಲೂನ್ ನಲ್ಲಿ ನೇತು ಹಾಕಲಾಗಿದೆ.

ಈ ನಡುವೆ ತಾಂತ್ರಿಕ ಅಂಶಗಳನ್ನು ಅಳವಡಿಸಿರುವ ಕಾರಣ ಹೈದರಾಬಾದ್ ಬಲೂನ್ ಕೇಂದ್ರದ ಅಧಿಕಾರಿಗಳು ಕೂಡ ಅದನ್ನು ಹಿಂಬಾಲಿಸಿಕೊಂಡು ಜಲಸಂಗಿ ಗ್ರಾಮಕ್ಕೆ ತಲುಪಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ. ಯಂತ್ರದ ಕುರಿತು ಗ್ರಾಮಸ್ಥರು ಮಾಹಿತಿ ನೀಡಿ, ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಇಂತಹ ಬಲೂನ್ ಗಳನ್ನು ವರ್ಷದಲ್ಲಿ ಎರಡು ಋತುಗಳಲ್ಲಿ ಹಾರಿಸಿ ಪರಿಸರದಲ್ಲಿನ ವಾತಾವರಣದ ಕುರಿತು ಪರೀಕ್ಷೆ ನಡೆಸುತ್ತವೆ ಎಂದು ಸ್ಥಳದಲ್ಲಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಲೂನ್ ಮೈಮೇಲೆ ಬದ್ದ ಕಾರಣ ಯುವಕನೋರ್ವನಿಗೆ ಚಿಕ್ಕಪುಟ್ಟ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಲೂನ್ ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಯುವಕನಿಗೆ ಪರಿಹಾರ ಹಣವನ್ನು ನೀಡಿ, ಬಲೂನ್ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X