ಬೀದರ್ | ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಐಶ್ವರ್ಯ ಗೆ ತೃತೀಯ ಸ್ಥಾನ

ಬೀದರ್: 2025–26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬೀದರ್ ಜಿಲ್ಲೆಯ ವಿದ್ಯಾರ್ಥಿನಿ ಐಶ್ವರ್ಯ ಅವರು ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಈ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಆಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಬೀದರ್ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಐಶ್ವರ್ಯ ಅವರು ಶ್ರೇಷ್ಠ ಪ್ರದರ್ಶನ ನೀಡಿ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
ಐಶ್ವರ್ಯ ಅವರ ಈ ಸಾಧನೆ ಬೀದರ್ ಜಿಲ್ಲೆಗೆ ಮಾತ್ರವಲ್ಲದೆ ಕರ್ನಾಟಕ ರಾಜ್ಯಕ್ಕೂ ಹೆಮ್ಮೆಯ ವಿಷಯವಾಗಿದೆ. ಅವರ ಶಿಸ್ತು, ಪರಿಶ್ರಮ ಮತ್ತು ನಿರಂತರ ಅಭ್ಯಾಸವೇ ಈ ಸಾಧನೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ವಿಶ್ವಾಸವಿದೆ ಎಂದುಕರಾಟೆ ತರಬೇತಿದಾರ ನಾಗೇಶ್ ಎಂ. ಮಂದಕನಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕ್ರೀಡಾಭಿಮಾನಿಗಳು, ಪೋಷಕರು ಹಾಗೂ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.





