Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕ್ಲಸ್ಟರ್ ಕಿಚನ್ ಸೆಂಟರ್...

Bidar | ಕ್ಲಸ್ಟರ್ ಕಿಚನ್ ಸೆಂಟರ್ ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ16 Nov 2026 6:32 PM IST
share
Bidar | ಕ್ಲಸ್ಟರ್ ಕಿಚನ್ ಸೆಂಟರ್ ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ಬೀದರ್: ಕ್ಲಸ್ಟರ್ ಕಿಚನ್ ಸೆಂಟರ್ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘದ ಸದಸ್ಯರು, ಕ್ಲಸ್ಟರ್ ಕಿಚನ್ ಸೆಂಟರ್ ಸ್ಥಾಪನೆ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಪಿಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿ ಬಿಸಿಯೂಟಕ್ಕಾಗಿ ಕ್ಲಸ್ಟರ್ ಕಿಚನ್‌ಗಳನ್ನು ರಚಿಸುವ ಕುರಿತು ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಹಾಗೂ ಶಿಕ್ಷಣಾಧಿಕಾರಿಗಳಿಗೆ ಪತ್ರ ಕಳುಹಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್‌ಗಳನ್ನು ರಚಿಸಬಾರದು. ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಈಗಿರುವ ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಸರ್ಕಾರಿ ಶಾಲೆಗಳು ಇರುವವರೆಗೆ ಬಿಸಿಯೂಟ ಮಕ್ಕಳ ಮೂಲಭೂತ ಹಕ್ಕಾಗಿರುತ್ತದೆ. ಬಿಸಿಯೂಟ ನೌಕರರ ಮೂಲ ಕೆಲಸ ಅಡುಗೆ ಮಾಡಿ ಮಕ್ಕಳಿಗೆ ಊಟ ಬಡಿಸುವುದಾಗಿದೆ. ಆದ್ದರಿಂದ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಆಗ್ರಹಿಸಲಾಗಿದೆ.

ಬಿಸಿಯೂಟ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಕೆಲವೆಡೆ ಪದವೀಧರರೂ ಇದ್ದಾರೆ. ಹೀಗಾಗಿ ಈ ಕೆಲಸ ನಿರ್ವಹಿಸಲು ಅವರಿಗೆ ಅಗತ್ಯ ಅರ್ಹತೆ ಮತ್ತು ಅನುಭವವಿದೆ. ಇಲಾಖೆಯು ಅವರ ಅನುಭವವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಅಗತ್ಯವಿದ್ದರೆ ಅಡುಗೆ ಸಿಬ್ಬಂದಿಯ ಕೆಲಸದ ಅವಧಿಯನ್ನು ವಿಸ್ತರಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷೆ ಪುಷ್ಪಾ ಮಜಗೆ, ಕಾರ್ಯದರ್ಶಿ ರೇಖಾ ಹಮಿಲಪುರಕರ್, ಖಜಾಂಚಿ ರುಕ್ಮಿಣಿ ರತನ್, ಜನವಾದಿ ಮಹಿಳಾ ಸಂಘಟನೆಯ ರೇಷ್ಮಾ ಹಂಸರಾಜ್, ಪ್ರಭು ಸಂತೋಷಕರ್, ಶ್ರೀದೇವಿ ಚೂಡೆ, ಪದ್ಮಾವತಿ ಸ್ವಾಮಿ, ಸಂಘಮಿತ್ರಾ ಹಾಗೂ ಆರತಿ ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು.

Tags

protestAkshara DasohaBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X