Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಸವಕಲ್ಯಾಣ ನಗರಸಭೆಯಲ್ಲಿ ನಕಲಿ...

Bidar | ಬಸವಕಲ್ಯಾಣ ನಗರಸಭೆಯಲ್ಲಿ ನಕಲಿ ಇ-ಖಾತಾ ಸೃಷ್ಟಿ ಆರೋಪ: ವಿಚಾರಣಾ ವರದಿಯಲ್ಲಿ ಬಹಿರಂಗ

ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ16 Nov 2026 6:42 PM IST
share
Bidar | ಬಸವಕಲ್ಯಾಣ ನಗರಸಭೆಯಲ್ಲಿ ನಕಲಿ ಇ-ಖಾತಾ ಸೃಷ್ಟಿ ಆರೋಪ: ವಿಚಾರಣಾ ವರದಿಯಲ್ಲಿ ಬಹಿರಂಗ

ಬೀದರ್: ಬಸವಕಲ್ಯಾಣ ನಗರಸಭೆಯ ಪೌರಾಯುಕ್ತ ರಾಜು ಡಿ.ಬಣಕಾರ, ಪ್ರಭಾರ ಕಂದಾಯ ಅಧಿಕಾರಿ ಸುನಿಲಕುಮಾರ್ ವೀರಶೆಟ್ಟಿ ಹಾಗೂ ಪ್ರಭಾರ ಶಾಖಾ ಕಂದಾಯ ನಿರೀಕ್ಷಕ ಸೂರ್ಯಕಾಂತ್ ಅವರು ನಕಲಿ ಸ್ವತ್ತು ಖಾತೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪ ಬಸವಕಲ್ಯಾಣದ ಸಹಾಯಕ ಆಯುಕ್ತರ ವಿಚಾರಣಾ ವರದಿಯಲ್ಲಿ ಬಹಿರಂಗವಾಗಿದೆ.

ಬಸವಕಲ್ಯಾಣ ನಗರದಲ್ಲಿ ಸರ್ಕಾರಿ ಜಮೀನು, ಗಾರ್ಡನ್, ಪಾರ್ಕಿಂಗ್ ಸ್ಥಳಗಳು ಹಾಗೂ ಕೆಲವು ಸರ್ವೆ ನಂಬರ್‌ಗಳ ಜಮೀನುಗಳಿಗೆ ಯಾವುದೇ ಸೇಲ್ ಡೀಡ್, ಆನ್‌ಲೈನ್ ಖಾತಾ ಮತ್ತು ಮ್ಯುಟೇಶನ್ ಇಲ್ಲದೆ ಖಾತೆಗಳನ್ನು ನೀಡಲಾಗಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬಸವಕಲ್ಯಾಣದ ಸಹಾಯಕ ಆಯುಕ್ತ ಪ್ರಕಾಶ್ ಬಿ. ಕುದರಿ ಅವರು ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದು, ಅದರಲ್ಲಿ ಅಕ್ರಮ ಖಾತೆಗಳ ಸೃಷ್ಟಿ ಪ್ರಕರಣ ಬೆಳಕಿಗೆ ಬಂದಿದೆ.

ಬಸವಕಲ್ಯಾಣ ನಗರದ ತ್ರಿಪೂರಾಂತ ಗ್ರಾಮದ ಸರ್ವೆ ನಂ. 135/1ರಲ್ಲಿನ 2 ಎಕರೆ 39 ಗುಂಟೆ ಜಮೀನು, ಬಸವಕಲ್ಯಾಣ ನಗರದ ಸರ್ವೆ ನಂ. 106/ಬಿ ಜಮೀನು, ಬಸವಕಲ್ಯಾಣ ಗ್ರಾಮದ ಸರ್ವೆ ನಂ. 34/9ರಲ್ಲಿನ 4 ಎಕರೆ 16 ಗುಂಟೆ ಜಮೀನು, ತ್ರಿಪೂರಾಂತ ಗ್ರಾಮದ ಸರ್ವೆ ನಂ. 266ರಲ್ಲಿನ 5 ಎಕರೆ ಜಮೀನು ಹಾಗೂ ಸರ್ವೆ ನಂ. 52/1ರ ಜಮೀನುಗಳಿಗೆ ನಗರಸಭೆಯ ಅಧಿಕಾರಿಗಳು ಕಾನೂನುಬಾಹಿರವಾಗಿ ಇ-ಆಸ್ತಿ ಖಾತಾ ಪ್ರತಿಗಳನ್ನು ವಿತರಿಸಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಅಧಿಕಾರ ಹಾಗೂ ಕರ್ತವ್ಯಗಳನ್ನು ದುರುಪಯೋಗಪಡಿಸಿಕೊಂಡು, ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿತ ಕಾರ್ಯವಿಧಾನ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಕಾನೂನುಬಾಹಿರವಾಗಿ ನಕಲಿ ಸ್ವತ್ತು ಖಾತೆಗಳನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಸರ್ಕಾರಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟುಮಾಡಿರುವುದು ದಾಖಲೆಗಳಿಂದ ಸ್ಪಷ್ಟವಾಗಿ ಕಂಡುಬರುತ್ತದೆ ಎಂದು ವಿಚಾರಣಾ ವರದಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಅಕ್ರಮವಾಗಿ ನೀಡಲಾದ ಖಾತೆಗಳು ಹಾಗೂ ಅನುಮತಿಗಳನ್ನು ನಿಯಮಾನುಸಾರ ಪರಿಶೀಲಿಸಿ ರದ್ದುಗೊಳಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

Tags

City Municipal CouncilBasavakalyanE-khataBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X