Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಒಳ ಮೀಸಲಾತಿಯಲ್ಲಿ ಬಲಗೈ...

Bidar | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಭಾಲ್ಕಿಯಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 March 2026 7:19 PM IST
share
Bidar | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಭಾಲ್ಕಿಯಲ್ಲಿ ಬೃಹತ್ ಪ್ರತಿಭಟನೆ

ಬೀದರ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಭಾಲ್ಕಿಯಲ್ಲಿ ಎಸ್ಸಿ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಭಾಲ್ಕೆಶ್ವರ್ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಬೊಮ್ಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಹಾಗೂ ಬಸವೇಶ್ವರ ವೃತ್ತದ ಮೂಲಕ ಸಾಗಿಬಂದು ಮತ್ತೆ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡಿತು. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ವಿಠಲದಾಸ್ ಪ್ಯಾಗೆ, ಬಲಗೈ ಸಮಾಜ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ಎಲ್ಲರಿಗೂ ನ್ಯಾಯ ಸಿಗುವಂತೆ ಕೆಲಸ ಮಾಡುತ್ತಿದ್ದೇವೆ. ಆದರೆ ಎಡಗೈ ಸಮುದಾಯದವರು ನಮ್ಮನ್ನು ವೈರಿಗಳಂತೆ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಲಗೈ ಸಮುದಾಯದವರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಎಡಗೈ ಸಮುದಾಯದವರು ಉದ್ದೇಶಪೂರ್ವಕವಾಗಿ ಆರೋಪಿಸುತ್ತಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ. ಆದರೆ ಒಳ ಮೀಸಲಾತಿ ಜಾರಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ರೀತಿಯ ರೋಸ್ಟರ್ ಪದ್ಧತಿಯನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

ಒಳ ಮೀಸಲಾತಿ ಜಾರಿಯಾದ ಬಳಿಕ ರೋಸ್ಟರ್ ಬಿಂದುಗಳ ನಿಗದಿಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಪ್ರವರ್ಗ-ಎ ಅನ್ನು 1ನೇ ಸ್ಥಾನದಲ್ಲಿ, ಪ್ರವರ್ಗ-ಬಿ ಅನ್ನು 9ನೇ ಸ್ಥಾನದಲ್ಲಿ ಹಾಗೂ ಪ್ರವರ್ಗ-ಸಿ ಅನ್ನು 15ನೇ ಸ್ಥಾನದಲ್ಲಿ ನಿಗದಿಪಡಿಸಿರುವುದು ಪ್ರಾಯೋಗಿಕವಾಗಿ ಸಮಾನ ಅವಕಾಶ ಒದಗಿಸುತ್ತದೆಯೇ ಎಂಬ ಪ್ರಶ್ನೆ ಮೂಡಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರೋಸ್ಟರ್ ಬಿಂದುಗಳನ್ನು ಮರುಪರಿಶೀಲನೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಲಾಸ್ ಮೊರೆ, ವಿಶ್ವನಾಥ್ ಮೊರೆ, ಪ್ರಕಾಶ್ ಭಾವಿಕಟ್ಟೆ, ಕಾಶೀನಾಥ್ ಚೆಲ್ವಾ, ಅಶೋಕ್ ಗಾಯಕವಾಡ್, ಮಾರುತಿ ಭಾವಿಕಟ್ಟೆ, ಕೈಲಾಶ್ ಭಾವಿಕಟ್ಟೆ, ಓಂಕಾರ್ ಮೊರೆ, ರಾಜಕುಮಾರ್ ಮೊರೆ, ಗಗನ್ ಫುಲೆ, ಕಪಿಲ್ ಗೋಡಬೋಲೆ, ನಾಗಾರ್ಜುನ್, ಪ್ರಕಾಶ್ ರಾವಣ, ಲೊಕೇಶ್ ಕಾಂಬ್ಳೆ, ಸಂಜು ಭಾವಿಕಟ್ಟಿ, ಶಿವಕುಮಾರ್ ಮೇತ್ರೆ, ಪ್ರಶಾಂತ್ ಕೋಟಗೇರಾ, ಪ್ರವೀಣ್ ಮೊರೆ, ರಾಜಕುಮಾರ್ ಬೌದ್ದೆ, ಸುರೇಶ್ ಕಾಣೆಕರ್, ಮಹೇಶ್ ಗೋರನಾಳಕರ್ ಹಾಗೂ ಸಮತಾ ಸೈನಿಕ ದಳದವರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.

Tags

BhalkiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X